
ಹಿರಿಯೂರು :
ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡಗಳು ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣದ ವಾತಾವರಣ ನಿರ್ಮಿಸಲು ಸಹಕಾರಿಯಾಗಲಿದ್ದು, ಸರ್ಕಾರದ ದೃಢ ಸಂಕಲ್ಪದಿಂದ ಗ್ರಾಮೀಣ ಪ್ರದೇಶಗಳಲ್ಲಿಯೂ ಆಧುನಿಕ ಶಿಕ್ಷಣ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.

ತಾಲ್ಲೂಕಿನ ಮರಡಿಹಳ್ಳಿ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ತರಗತಿಗಳ ಹೊಸ ಕಟ್ಟಡ ಉದ್ಘಾಟನಾ ಸಮಾರಂಭ ಹಾಗೂ ಪ್ರೌಢಶಾಲೆಯ ಕೊಠಡಿಗಳ ದುರಸ್ಥಿ, ಅಡುಗೆಮನೆ ಮತ್ತು ಭೋಜನ ಶಾಲೆಯ ಶಂಕುಸ್ಥಾಪನೆ ಕಾರ್ಯಕ್ರಮವನ್ನು ನೆರವೇರಿಸಿ, ನಂತರ ಅವರು ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರುಗಳು ಹಾಗೂ ಪಕ್ಷದ ಸ್ಥಳೀಯ ಕಾರ್ಯಕರ್ತರುಗಳು, ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು.


