
ಹಿರಿಯೂರು:
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನವಂಬರ್ 8ರಂದು ಕನಕದಾಸ ಜಯಂತಿ ಹಾಗೂ ನವಂಬರ್ 11 ರಂದು ಒನಕೆ ಓಬವ್ವ ಜಯಂತಿಯನ್ನು ಆಯಾ ದಿನಾಂಕಗಳಂದು ಬೆಳಗ್ಗೆ 10.30ಕ್ಕೆ ಆಚರಿಸಲಾಗುತ್ತದೆ ಎಂಬುದಾಗಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಹಾಗೂ ತಾಲ್ಲೂಕು ತಹಶೀಲ್ದಾರ್ ರಾದ ಸಿದ್ದೇಶ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿ ವರ್ಗದವರು, ನಗರಸಭೆಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಎಲ್ಲಾ ಚುನಾಯಿತ ಸದಸ್ಯರುಗಳು ಹಾಗೂ ಸಮಾಜದ ಎಲ್ಲಾ ಮುಖಂಡರು, ಪತ್ರಿಕಾ ಮಾಧ್ಯಮ ಮಿತ್ರರು, ಎಲ್ಲಾ ಕನ್ನಡಪರ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಅಧ್ಯಕ್ಷರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ರೈತ ಸಂಘ, ವಕೀಲರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ದಲಿತಪರ ಸಂಘಟನೆಗಳು, ಎಲ್ಲಾ ಸಹಕಾರ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕರ್ನಾಟಕ ಸರ್ಕಾರಿ ನೌಕರರ ಸಂಘ, ಹಿರಿಯೂರು ಶಾಖೆ ಈ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕು ಎಂಬುದಾಗಿ ಅವರು ಈ ಮೂಲಕ ಮನವಿ ಮಾಡಿದ್ದಾರೆ.

