
ಹಿರಿಯೂರು:
ತಾಲ್ಲೂಕಿನ ದಿಂಡಾವರ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಿರುವ 66/11 ವಿದ್ಯುತ್ ಉಪ ಕೇಂದ್ರ ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು ದಿಂಡಾವರ ವಿದ್ಯುತ್ ಉಪಕೇಂದ್ರ ಆವರಣದಲ್ಲಿ ನವಂಬರ್ 8ರ ಶನಿವಾರ ಮಧ್ಯಾಹ್ನ 2:30ಕ್ಕೆ ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ .ಸುಧಾಕರ್ ಅವರು ಉದ್ಘಾಟಿಸಲಿದ್ದಾರೆ ಎಂಬುದಾಗಿ ದಿಂಡಾವರ ಗ್ರಾಮ ಪಂಚಾಯಿತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಗಸ್ವಾಮಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ವಿದ್ಯುತ್ ಉಪಕೇಂದ್ರ ಹೆಚ್ಚಿನದಾಗಿ ಅನುದಾನ ತಂದು ರೈತರಿಗೆ ಕೃಷಿಪಂಪ್ ಗಳಿಗೆ ಉಪಯೋಗವಾಗಲಿ ಎಂಬ ಉದ್ದೇಶ ಸಚಿವರದ್ದಾಗಿದೆ, ಈ ನಿಟ್ಟಿನಲ್ಲಿ ವಿದ್ಯುತ್ ಉಪಕೇಂದ್ರ ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು ನವಂಬರ್ 8ರ ಶನಿವಾರ ನಡೆಸಲಾಗುತ್ತಿದೆ ಎಂಬುದಾಗಿ ಅವರು ತಿಳಿಸಿದ್ದಾರೆ.

ಈ ಕಾರ್ಯಕ್ರಮಕ್ಕೆ ದಿಂಡಾವರ ಲಾಯರ್, ದಾಸರಹಳ್ಳಿ ರಸ್ತೆ ಉಪಕೇಂದ್ರ ಆವರಣಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ರೈತಪರ ಹೋರಾಟಗಾರರು, ರೈತರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು, ಮಹಿಳಾ ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಡಿ. ಸುಧಾಕರ್ ಅವರ ಅಭಿಮಾನಿ ಬಳಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
