March 5, 2026
1+

ಹಿರಿಯೂರು :

ಸ್ವತಂತ್ರ ಭಾರತದ ಮೊದಲ ಪ್ರಧಾನ ಮಂತ್ರಿಯಾಗಿದ್ದ ಜವಾಹರಲಾಲ್ ನೆಹರು ಅವರು, ಈ ದೇಶ ಕಂಡಂತಹ  ಅತ್ಯುತ್ತಮ ರಾಜಕೀಯ ಮುತ್ಸದ್ಧಿ, ನೆಹರುರವರಿಗೆ ಮಕ್ಕಳನ್ನು ಕಂಡರೆ ತುಂಬಾ ಪ್ರೀತಿ, ಅವರು ತಮ್ಮ ಹುಟ್ಟುಹಬ್ಬವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಬೇಕು ಎಂದು ಹೇಳಿದ ಮಹಾನ್ ನಾಯಕ, ಅವರ ವ್ಯಕ್ತಿತ್ವ ಇಂದಿನ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಬೇಕು ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ ಹೇಳಿದರು.

ನಗರದ ನೆಹರುಮೈದಾನದಲ್ಲಿರುವ ವಾಣಿವಿಲಾಸ ವಿದ್ಯಾಸಂಸ್ಥೆ ಆವರಣದಲ್ಲಿ ಜವಹರ್ ಲಾಲ್ ನೆಹರು ಜನ್ಮದಿನಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ “ಮಕ್ಕಳ ದಿನಾಚರಣೆ” ಕಾರ್ಯಕ್ರಮವನ್ನು ಗಿಡಕ್ಕೆ ನೀರೆಯುವ ಮೂಲಕ ಉದ್ಘಾಟಿಸಿ, ನಂತರ ಅವರು ಮಾತನಾಡಿದರು.

ಮಾಜಿ ಪ್ರಧಾನಿ ದಿ.ಜವಾಹರ್ ಲಾಲ್ ನೆಹರುರವರ ದೂರದೃಷ್ಠಿ, ಅವರ ತತ್ವ, ಆದರ್ಶಗಳು, ಆಡಳಿತ ಶೈಲಿ ಇಂದಿನ ಯುವ ರಾಜಕಾರಣಿಗಳಿಗೆ ಸ್ಪೂರ್ತಿಯಾಗಿದ್ದು, ಭಾವೀ ಭವಿಷ್ಯದ ಪ್ರಜೆಗಳಾದ ನೀವುಗಳು ನಿಮ್ಮ ಬದುಕಿನಲ್ಲಿ ಜವಾಹರ್ ಲಾಲ್ ನೆಹರುರವರನ್ನು ಮಾದರಿಯಾಗಿ ಸ್ವೀಕರಿಸುವ ಮೂಲಕ ದೇಶವನ್ನು ಪ್ರಗತಿಯತ್ತ ಮುನ್ನಡೆಸಬೇಕು ಎಂಬುದಾಗಿ ಅವರು ಹೇಳಿದರು.

ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿಗಳಿಗೋಸ್ಕರ ನಡೆಸುವ ಈ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ನಾವೆಲ್ಲರೂ ಸಡಗರ-ಸಂಭ್ರಮದಿಂದ ಆಚರಿಸಬೇಕು, ನಾವು ಉತ್ತಮವಾಗಿ ಅಭ್ಯಾಸ ಮಾಡುವ ಮೂಲಕ ಪರೀಕೆಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದು, ಹೆತ್ತ ತಂದೆ-ತಾಯಿಗಳಿಗೆ ಓದಿದ ಶಾಲೆಗೆ ಕೀರ್ತಿಯನ್ನು ತರುವಂತ ಮಕ್ಕಳಾಗಬೇಕು, ತಂದೆ-ತಾಯಿಗಳ ಮುದ್ದಿನ ಮಕ್ಕಳಾದ ನಿಮ್ಮೆಲ್ಲರಿಗೂ ಮಕ್ಕಳ ದಿನಾಚರಣೆಯ ಶುಭಾಶಯಗಳು ಎಂಬುದಾಗಿ ಹೇಳಿದರು.

ಈ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಾದ ಹಂಸಧ್ವಜ, ಉಮರ್ ಫಾರೋಕ್, ಹರ್ಷವರ್ಧನ್, ಮಾನ್ಯ, ಜುಹಾತಾಜ್, ನಿದಾ ಸೆಹೇಲ್, ಇವರುಗಳು ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಕೋ-ಆರ್ಡಿನೇಟರ್ ಗಳಾದ ಶ್ರೀಮತಿ ನಂದಿನಿ, ಶ್ರೀಮತಿ ರಚನ, ಶಿಕ್ಷಕ-ಶಿಕ್ಷಕಿಯರುಗಳಾದ ಉಮೇಶ್ ಯಾದವ್, ಶಿವರಾಜ್ ನಾಯಕ್, ಶ್ರೀಮತಿ ಗಂಗಮ್ಮ, ಶ್ರೀಮತಿ ರಜೀಯಾ, ಶ್ರೀಮತಿ ರಂಜಿತಾ, ಶ್ರೀಮತಿ ಮುಬೀನಾ, ಶ್ರೀಮತಿ ಸಬೀಹಾ, ಶ್ರೀಮತಿ ಮಮತಾ, ಶ್ರೀಮತಿ ಸುಲೋಚನಾ, ಪೂಜಾ, ಕಾವ್ಯ, ಶ್ರೀಮತಿ ಸಾಧಿಕಾ, ಶ್ರೀಮತಿ ದ್ರಾಕ್ಷಾಯಣಿ, ಶ್ರೀಮತಿ ಅಕ್ಷಿತಾ, ಕಾರ್ಯಕ್ರಮದ ಸಂಯೋಜಕರಾದ ಶ್ರೀಮತಿ ಭಾಗ್ಯ, ಶ್ರೀಮತಿ ಜಯಸುಧಾ, ಪ್ರಭಾಕರ್, ಸೇರಿದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

About The Author

Leave a Reply

Your email address will not be published. Required fields are marked *