March 6, 2026
000003

ನಗರದ ಎ.ಪಿ.ಎಂ.ಸಿ.ಆವರಣದಲ್ಲಿ ನವೆಂಬರ್ 16ರಂದು 72ನೇ

ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಂಡಿದೆ

ಶ್ರೀಕೆಂಪೇಗೌಡಪತ್ತಿನಸಹಕಾರಸಂಘ ಅಧ್ಯಕ್ಷ ಜಗದೀಶ್ ಕಂದಿಕೆರೆ

ಹಿರಿಯೂರು :

ನಗರದ ಎ.ಪಿ.ಎಂ.ಸಿ. ಆವರಣದಲ್ಲಿ ನವೆಂಬರ್ 16ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ   ಶ್ರೀಕೆಂಪೇಗೌಡ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಜಗದೀಶ್ ಕಂದಿಕೆರೆ ಅವರು ಹೇಳಿದರು.

ತಾಲ್ಲೂಕಿನಲ್ಲಿ 120 ಸಹಕಾರ ಸಂಘಗಳಿವೆ. ಇದರಲ್ಲಿ 64 ಹಾಲು ಉತ್ಪಾದಕರ ಸಹಕಾರ ಸಂಘಗಳು, 33 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, 1 ಪಿಎಲ್.ಡಿ ಬ್ಯಾಂಕ್, 1 ಟಿಎಪಿಸಿಎಂಎಸ್ ಬ್ಯಾಂಕ್ ಹಾಗೂ ಉಳಿದ 21  ಕ್ರೆಡಿಟ್  ಸೈಸೋಟಿಗಳು  ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. 

ಈ ಸಹಕಾರಿ ಸಪ್ತಾಹ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ  ಡಿ.ಸುಧಾಕರ್ ಅವರು ಉದ್ಘಾಟಿಸುವರು. ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಗದೀಶ್ ಕಂದಿಕೆರೆ ಅಧ್ಯಕ್ಷತೆ ವಹಿಸುವರು. ವಾಣಿವಿಲಾಸ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಆಲೂರು ಹನುಮಂತರಾಯಪ್ಪನವರು ಪ್ರಾಸ್ತಾವಿಕ ನುಡಿಗಳನ್ನಾಡುವರು. ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಅಧ್ಯಕ್ಷರಾದ ಹೆಚ್.ಎನ್ ತಿಪ್ಪೇಸ್ವಾಮಿ ಅವರು ಹಿರಿಯ ಸಹಕಾರಿಗಳಿಗೆ ಸನ್ಮಾನಿಸುವರು.   

ಯೂನಿಯನ್ ನಿಯಮಿತ ನಿರ್ದೇಶಕ ಈರಲೀಂಗೌಡ ಅವರು ಉತ್ತಮ ಸಹಕಾರ ಸಂಘಗಳಿಗೆ ಹಾಗೂ ನಿವೃತ್ತ ನೌಕರರು ಸಹಕಾರಿಗಳಿಗೆ  ಮಂಜುನಾಥ್ ಮಾಳಿಗೆ ರವರು ಸನ್ಮಾನಿಸಲಿದ್ದಾರೆ ಎಂಬುದಾಗಿ ಅವರು ಹೇಳಿದರು. 

ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷರಾದ ಎಸ್.ಜೆ. ಹನುಮಂತರಾಯ, ಶಿಮುಲ್ ಹಾಗೂ ಯೂನಿಯನ್ ನಿರ್ದೇಶಕ ಬಿ.ಸಿ.ಸಂಜೀವಮೂರ್ತಿ ಸೇರಿದಂತೆ ತಾಲ್ಲೂಕಿನ ಎಲ್ಲಾ ಸಹಕಾರ ಸಂಘಗಳ ಆಡಳಿತ ಮಂಡಳಿಯ ಸದಸ್ಯರು, ನೌಕರರು, ಹಿರಿಯ ಹಾಗೂ ನಿವೃತ್ತ ಸಹಕಾರಿಗಳು ಮತ್ತು ಸಹಕಾರ ಸಂಘಗಳ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು.  

ತಾಲೂಕು ಸಹಕಾರಿ ಸಂಘಗಳ ಯುನಿಯನ್ ರಚಿಸುವ ಮತ್ತು ಸಂಘಟಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ತಪ್ಪದೇ ಭಾಗವಹಿಸುವ ಮೂಲಕ ಈ ಸಹಕಾರಿ ಸಪ್ತಾಹವನ್ನು ಯಶಸ್ವಿಗೊಳಿಸಬೇಕು ಎಂಬುದಾಗಿ ಅವರು  ಜಗದೀಶ್ ಕಂದಿಕೆರೆ ಮಾಧ್ಯಮಗಳ ಮೂಲಕ ಮನವಿ ಮಾಡಿದ್ದಾರೆ.

About The Author

Leave a Reply

Your email address will not be published. Required fields are marked *