April 23, 2026
00003

ಹಿರಿಯೂರು:

ಭವ್ಯಭಾರತದ ಪ್ರಜೆಗಳಾದ ಇಂದಿನ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಬೇಕು. ಸಂಸ್ಕಾರ ರೂಡಿಸಿಕೊಂಡು ಪೋಷಕರು ಹಾಗೂ ಸಮಾಜಕ್ಕೆ ಕೀರ್ತಿ ತರುವಂತೆ ರೋಟರಿ ಕ್ಲಬ್ ಅಧ್ಯಕ್ಷರಾದ ಕೆ.ಎ.ವರುಣ್ ಅವರು ಹೇಳಿದರು.

ನಗರದ ವಾಸವಿ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ  ಮಕ್ಕಳ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ವತಿಯಿಂದ ನೂರಾರು ವಿದ್ಯಾರ್ಥಿಗಳಿಗೆ ಸಿಹಿ ವಿತರಿಸುವ ಕಾರ್ಯಕ್ರಮವನ್ನು  ಉದ್ಘಾಟಿಸಿ ಅವರು ಮಾತನಾಡಿದರು.

“ಬೆಳೆಯುವ ಸಿರಿ ಮೊಳಕೆಯ” ಎಂಬ ಮಾತಿನಂತೆ ಮಕ್ಕಳ ತಪ್ಪುಗಳನ್ನು ಚಿಕ್ಕ ವಯಸ್ಸಿನಲ್ಲಿಯೇ  ಸರಿಪಡಿಸಿದರೆ ಭವಿಷ್ಯದಲ್ಲಿ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ ಎಂಬುದಾಗಿ ಅವರು ಹೇಳಿದರು.

ಈ ಕಾರ್ಯಕ್ರಮದಲ್ಲಿ  ವಾಸವಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಶ್ರೀಧರ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಉಪಾಧ್ಯಕ್ಷರು, ಕಾರ್ಯದರ್ಶಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *