March 2, 2026
00001

ಹಿರಿಯೂರು:             

ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸನ್ಮಾನ್ಯ ಶ್ರೀಮತಿ ಸೌಮ್ಯ ರೆಡ್ಡಿ ರವರು ಹಿರಿಯೂರು ನಗರಸಭೆ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆಯಾದ ಶ್ರೀಮತಿ ಶಿವರಂಜಿನಿಯಾದವ್ ಅವರನ್ನು ಬೀದರ್ ಜಿಲ್ಲೆಗೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ನ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ.

ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸನ್ಮಾನ್ಯ ಶ್ರೀಮತಿ ಸೌಮ್ಯ ರೆಡ್ಡಿ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಿರಿಯೂರು ಮಹಿಳಾ ಕಾಂಗ್ರೆಸ್ ಮುಖಂಡರಾದ ಶ್ರೀಮತಿ ಶಿವರಂಜಿನಿಯಾದವ್ ರವರನ್ನು ಬೀದರ್ ಜಿಲ್ಲೆಗೆ ಮಹಿಳಾ ಉಸ್ತುವಾರಿಯಾಗಿ ಆಯ್ಕೆ ಮಾಡಲಾಯಿತು.

ಈ ಸಭೆಯಲ್ಲಿ ಪಕ್ಷ ವಹಿಸಿದಂತಹ ಕ್ಷೇತ್ರಗಳಲ್ಲಿ ಯಾವ ರೀತಿ ಪಕ್ಷ ಸಂಘಟನೆ ಮಾಡಬೇಕು ಯಾವ ರೀತಿ ಪಕ್ಷ ಬಲವರ್ಧನೆ ಮಾಡಬೇಕು ಎಂಬುದರ ಬಗ್ಗೆ ಕಾಂಗ್ರೆಸ್ ಪಕ್ಷ ಪಂಚ ಗ್ಯಾರಂಟಿಗಳ ಬಗ್ಗೆ ಸಾರ್ವಜನಿಕರಿಗೆ ಮನವೊಲಿಕೆ ಮಾಡಿಕೊಡುವ ಬಗ್ಗೆ ಕಾಂಗ್ರೆಸ್ ಪಕ್ಷ ಸರ್ವ ಜನಾಂಗವನ್ನು ಯಾವ ರೀತಿ ನಡೆಸಿಕೊಂಡು ಹೋಗುತ್ತಿದೆ

ಜೊತೆಗೆ ಮಹಿಳೆಯರ ಪರವಾಗಿ ದೀನ ದಲಿತರ ಪರವಾಗಿ ಹಿಂದುಳಿದವರ ಪರವಾಗಿ ಕಾಂಗ್ರೆಸ್ ಪಕ್ಷ ಕೊಟ್ಟಂತ ಕಾರ್ಯಕ್ರಮಗಳು ಹಾಗೂ ಇದನ್ನೆಲ್ಲ ಮುಂದಿಟ್ಟುಕೊಂಡು ಸಂಘಟನೆ ಮಾಡಿ ಸಾರ್ವಜನಿಕವಾಗಿ ತಿಳುವಳಿಕೆ ಮೂಡಿಸುವ ಕುರಿತಂತೆ ಸಭೆಯಲ್ಲಿ ಸಲಹೆ ಸೂಚನೆಗಳನ್ನು ನೀಡಲಾಯಿತು.

ಬೀದರ್ ಪ್ರದೇಶ ಮಹಿಳಾ ಕಾಂಗ್ರೆಸ್ ನ ನೂತನ ಉಸ್ತುವಾರಿಯಾದ ಶ್ರೀಮತಿ ಶಿವರಂಜಿನಿಯಾದವ್ ತಮ್ಮನ್ನು ಬೀದರ್ ನ ನೂತನ ಉಸ್ತುವಾರಿಯಾಗಿ ನೇಮಕಮಾಡಿರುವ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸನ್ಮಾನ್ಯ ಶ್ರೀಮತಿ ಸೌಮ್ಯ ರೆಡ್ಡಿ ರವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರುಗಳು ಕಾರ್ಯದರ್ಶಿಗಳು ಪ್ರಧಾನ ಕಾರ್ಯದರ್ಶಿಗಳು ಜಿಲ್ಲಾಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು .

About The Author

Leave a Reply

Your email address will not be published. Required fields are marked *