
ಹಿರಿಯೂರು:
ನಗರದ ರೋಟರಿ ಸಭಾಭವನದಲ್ಲಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ಹಿರಿಯೂರು ಉಪವಿಭಾಗ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಿರಿಯೂರು ಶಾಖೆ, ರೋಟರಿ ಹಿರಿಯೂರು, ಸರ್ವೋದಯ ಥಯೋಸಾಫಿಕಲ್ ಸೊಸೈಟಿ ಹಿರಿಯೂರು, ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಇವರುಗಳ ಸಂಯುಕ್ತಾಶ್ರಯದಲ್ಲಿ ನವಂಬರ್ 21ರಂದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ರೆಡ್ ಕ್ರಾಸ್ ಸಂಸ್ಥೆ ಚೇರ್ಮನ್ ಹೆಚ್.ಎಸ್.ಸುಂದರ್ ರಾಜ್ ತಿಳಿಸಿದ್ದಾರೆ.
ಈ ಸ್ವಯಂಪ್ರೇರಿತ ರಕ್ತದಾನ ಶಿಬಿರಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಮೂಲಕ ತಮ್ಮ ಅಮೂಲ್ಯವಾದ ರಕ್ತವನ್ನು ದಾನ ಕೊಡುವುದರಿಂದ ತುರ್ತು ಸಂದರ್ಭದಲ್ಲಿ ಒಬ್ಬ ವ್ಯಕ್ತಿಯ ಜೀವವನ್ನು ಉಳಿಸಲು ನೆರವಾಗುವ ಜೊತೆಗೆ ಶಿಬಿರವನ್ನು ಯಶಸ್ವಿಗೊಳಿಸಬೇಕು ಎಂಬುದಾಗಿ ರೆಡ್ ಕ್ರಾಸ್ ಸಂಸ್ಥೆ ಚೇರ್ಮನ್ ಹೆಚ್.ಎಸ್.ಸುಂದರ್ ರಾಜ್ ಮನವಿ ಮಾಡಿದ್ದಾರೆ.

