

ಹಿರಿಯೂರು :
ತಾಲ್ಲೂಕಿನ ವದ್ದಿಕೆರೆ-ಸೊಂಡೇಕೆರೆ, ಎಂ.ಡಿ.ಕೋಟೆ ಸಂಪರ್ಕ ರಸ್ತೆ ಗುಂಡಿ ಬಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ಸೇರಿದಂತೆ ಯಾವುದೇ ವಾಹನದಲ್ಲಾಗಲಿ ಸಂಚರಿಸಲು ಸಾಧ್ಯವಿಲ್ಲದ ಸ್ಥಿತಿಗೆ ತಲುಪಿದೆ ಎಂಬುದಾಗಿ ನೀರಾವರಿ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಮೇಶ್ ಆಪಾದಿಸಿದ್ದಾರೆ.
ಇದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಭರಾಟೆಯಲ್ಲಿ ಆಗಿರುವ ಅಭಿವೃದ್ಧಿಯಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು, ಗಮನಹರಿಸಿ, ರಸ್ತೆಗುಂಡಿಗಳನ್ನು ಮುಚ್ಚಿಸಿ ರಸ್ತೆ ಕಾಮಗಾರಿ ನಡೆಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂಬುದಾಗಿ ಅವರು ಈ ಮೂಲಕ ಮನವಿ ಮಾಡಿದ್ದಾರೆ.