
ಹಿರಿಯೂರು:
ಶ್ರೀಯುತ ಮಂಜುನಾಥ್ ರವರು ಕಳೆದ ಎರಡು ವರ್ಷಗಳಿಂದ ಪ್ರಾಮಾಣಿಕವಾಗಿ ರೈತಸ್ನೇಹಿಯಾಗಿ ಸರ್ಕಾರದ ಯೋಜನೆಗಳನ್ನು ರೈತರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದು ತಾಲ್ಲೂಕಿನಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ್ದು, ಬಿತ್ತನೆ ಬೀಜ ಮತ್ತು ಕೃಷಿ ಪರಿಕರಗಳನ್ನು ಸಕಾಲಕ್ಕೆ ರಿಯಾಯಿತಿ ದರದಲ್ಲಿ ರೈತರಿಗೆ ತಲುಪಿಸಿರುತ್ತಾರೆ ಎಂಬುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ವಿಭಾಗೀಯ ಉಪಾಧ್ಯಕ್ಷರಾದ ಕೆ.ಸಿ. ಹೊರಕೇರಪ್ಪ ಅವರು ಹೇಳಿದರು.
ನಗರದ ಹೊರವಲಯದಲ್ಲಿರುವ ವೈಟ್ ವಾಲ್ ಸಭಾಂಗಣದಲ್ಲಿ ಹಿರಿಯೂರು ಕೃಷಿ ಇಲಾಖೆಯಲ್ಲಿ ಕಳೆದ ಎರಡು ವರ್ಷಗಳಿಂದ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಮೊಳಕಾಲ್ಮೂರು ಕೃಷಿ ಇಲಾಖೆಗೆ ವರ್ಗಾವಣೆಗೊಂಡಿರುವ ಹಿರಿಯೂರು ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಯುತ ಮಂಜುನಾಥ್ ರವರಿಗೆ ಹಿರಿಯೂರು ತಾಲ್ಲೂಕು ರೈತ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶ್ರೀಯುತ ಮಂಜುನಾಥ್ ರವರು ಇಲಾಖೆ ಆವರಣದಲ್ಲಿ ಅನೇಕ ಕಾರ್ಯಗಳನ್ನು ಮಾಡಿ ಸರ್ಕಾರದ ಯೋಜನೆಗಳನ್ನು, ಮಾಹಿತಿಗಳನ್ನು ರೈತರಿಗೆ ತಿಳಿಸಿ ರೈತಸ್ನೇಹಿ ಆಗಿರುತ್ತಾರೆ. ಉಳಿದ ಅವಧಿಯಲ್ಲಿ ಸಹ ಉತ್ತಮ ಕಾರ್ಯ ನಿರ್ವಹಿಸುವಂತೆ ಶುಭ ಹಾರೈಸಿ, ಸತ್ಕರಿಸಿ , ಅಭಿನಂದಿಸಿ, ಸನ್ಮಾನಿಸಿ ಬಿಳ್ಕೊಡಲಾಯಿತು.
ಇದೇ ಸಂದರ್ಭದಲ್ಲಿ ನೂತನವಾಗಿ ಹಿರಿಯೂರು ಕೃಷಿ ಇಲಾಖೆಗೆ ಸಹಾಯಕ ಕೃಷಿ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದ ಅಶೋಕ್ ರವರನ್ನು ಸನ್ಮಾನಿಸಿ, ಸ್ವಾಗತಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷಿ ಇಲಾಖೆ ಉಪ ನಿರ್ದೇಶಕರಾದ ಶಿವಕುಮಾರ್ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಹಿರಿಯೂರು ತಾಲ್ಲೂಕು ರೈತ ಸಂಘದ ಅಧ್ಯಕ್ಷರಾದ ಬ್ಯಾಡರಹಳ್ಳಿ ಶಿವಕುಮಾರ್, ಕಾರ್ಯಾಧ್ಯಕ್ಷ ಎಚ್. ದಸ್ತಗಿರಿಸಾಬ್, ಯುವ ಘಟಕದ ಅಧ್ಯಕ್ಷರಾದ ಚೇತನ್ ಯಳನಡು, ಜಿಲ್ಲಾ ಉಪಾಧ್ಯಕ್ಷರಾದ ಎಂ ಲಕ್ಷ್ಮಿಕಾಂತ್, ಬಿ.ಡಿ.ಶ್ರೀನಿವಾಸ್, ತಾಲ್ಲೂಕು ಉಪಾಧ್ಯಕ್ಷರಾದ ಮೇಟಿಕುರ್ಕೆ ತಿಪ್ಪೇಸ್ವಾಮಿ, ಶ್ರೀಮತಿನಿತ್ಯಶ್ರೀ, ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಕೆ.ಟಿ. ತಿಪ್ಪೇಸ್ವಾಮಿ, ತಾಲ್ಲೂಕು ಅಧ್ಯಕ್ಷರಾದ ಸಿದ್ದರಾಮಣ್ಣ, ಹೊಳಲ್ಕೆರೆ ಕೃಷಿ ಇಲಾಖೆಯ ಸಹಾಯ ನಿರ್ದೇಶಕರಾದ ಚಂದ್ರಕುಮಾರ್, ಬಬ್ಬೂರು ಸಂತೋಷ್ , ಬಬ್ಬೂರು ಸುರೇಶ್, ಶಿವಮೂರ್ತಿ , ಪವಿತ್ರ, ಪಾರ್ವತಮ್ಮ, ಪಲ್ಲವಿ, ಚಂದ್ರಶೇಖರ್, ಕಿರಣ್ ಕುಮಾರ್, ವೆಂಕಟೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

