March 2, 2026
00005

ಹಿರಿಯೂರು:

ನಗರದ ಶ್ರೀ ವಾಗ್ದೇವಿ ವಿದ್ಯಾಸಂಸ್ಥೆಯ ಆವರಣದಲ್ಲಿ ಕನ್ನಡ ಹಿರಿಯ ಪ್ರಾಥಮಿಕ  ಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ಕ್ರೀಡಾಕೂಟ ವನ್ನು ಆಯೋಜಿಸಲಾಗಿತ್ತು.

 ಈ ಕ್ರೀಡಾಕೂಟಕ್ಕೆ ಮುಖ್ಯ ಶಿಕ್ಷಕರಾದ ಹೆಚ್.ಸಿ.ಶರಣಪ್ಪ ಅವರು ಚಾಲನೆ ನೀಡಿ ಮಾತನಾಡಿದ ಅವರು ಆಟದಷ್ಟೇ ಆಸಕ್ತಿಯನ್ನು ಓದಿನ ಕಡೆಗೂ ಕೊಡಬೇಕು ಎಂಬುದಾಗಿ ಅವರು ಹೇಳಿದರು.

ಸಂಸ್ಥೆಯ ಆಡಳಿತ ಕಾರ್ಯದರ್ಶಿ ಕೆ.ಜಿ.ಶ್ರೀಧರ್ ಅವರು ಬಹುಮಾನ ವಿತರಿಸಿ ಮಾತನಾಡಿ, ಕ್ರೀಡೆ ದೈಹಿಕ ಸಾಮಾರ್ಥ್ಯ ಹೆಚ್ಚಿಸಿದರೆ, ಶಿಕ್ಷಣ ಜ್ಞಾನವನ್ನು ನೀಡುತ್ತದೆ. ಆರೋಗ್ಯ ಮತ್ತು ಜ್ಞಾನ ಎರಡೂ   ಮನುಷ್ಯರಿಗೆ ಅತ್ಯವಶ್ಯಕ ಎಂಬುದಾಗಿ ಅವರು ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ದಿಲೀಪ್, ಮಂಜುನಾಥ್, ತಿಪ್ಪೇಸ್ವಾಮಿ, ಶಿವಶಂಕರ್ ಮಠದ್, ದೈಹಿಕ ಶಿಕ್ಷಣ ಶಿಕ್ಷಕರಾದ ದಿಲೀಪ್, ಸಹಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *