
ಹಿರಿಯೂರು :
ಮಕ್ಕಳ ಸಮಗ್ರ ಅಭಿವೃದ್ಧಿಗೆ, ಪೌಷ್ಠಿಕ ಆಹಾರ, ಶಿಕ್ಷಣ ಮತ್ತು ಆರೈಕೆ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ದಿಟ್ಟ ಹೆಜ್ಜೆಯಾಗಿ ಈ ಅಂಗನವಾಡಿ ಕೇಂದ್ರವನ್ನು ತೆರೆಯಲಾಗಿದ್ದು, ಈ ಅಂಗನವಾಡಿ ಕೇಂದ್ರ ಮಕ್ಕಳಿಗೆ ಉತ್ತಮ ಸೇವೆ ಸಲ್ಲಿಸಲಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.

ತಾಲೂಕಿನ ಬಬ್ಬೂರು ಗ್ರಾಮದಲ್ಲಿ ಆರಂಭಿಸಲಾದ ಹೊಸ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮದ ಮಹಿಳೆಯರು, ಮಕ್ಕಳ ತಾಯಂದಿರು ಹಾಗೂ ಸ್ಥಳೀಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.


