
ಹಿರಿಯೂರು :
ಗ್ರಾಮದ ಜನರ ದೀರ್ಘಕಾಲದ ಬೇಡಿಕೆಯಾಗಿದ್ದ ಸಿ.ಸಿ.ರಸ್ತೆ ಅಭಿವೃದ್ಧಿ ಕಾರ್ಯ ಪೂರ್ಣಗೊಂಡ ನಂತರ, ಸ್ಥಳೀಯ ನಿವಾಸಿಗಳಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ಸೌಲಭ್ಯ ಒದಗಲಿದೆ. ಗ್ರಾಮಾಭಿವೃದ್ಧಿಯನ್ನು ವೇಗಗೊಳಿಸುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಇಡಲಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ತಾಲೂಕಿನ ಹುಲಿತೊಟ್ಲು ಗ್ರಾಮದ ಎಸ್.ಟಿ.ಕಾಲೋನಿಯಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿ, ನಂತರ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಗ್ರಾಮದ ಮುಖಂಡರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

