March 5, 2026
00003

ಹಿರಿಯೂರು :

ನಗರದ ಸಿದ್ಧನಾಯಕ ವೃತ್ತದ ಬಳಿ ಇರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿಯ ವಿಶೇಷ ಪೂಜಾ ಕಾರ್ಯಕ್ರಮವನ್ನು ಅತ್ಯಂತ ಸಡಗರ-ಸಂಭ್ರಮದಿಂದ ಅದ್ದೂರಿಯಾಗಿ ಆಚರಿಸಲಾಯಿತು.

ಹನುಮಜಯಂತಿ ಅಂಗವಾಗಿ ಶ್ರೀಆಂಜನೇಯ ಸ್ವಾಮಿಗೆ ಪುಷ್ಪಾರ್ಚನೆ, ಪಂಚಾಮೃತ ಅಭಿಷೇಕ, ವಿವಿಧ ವಿಶೇಷ ಹೂವಿನ ಅಲಂಕಾರ ಹಾಗೂ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು.

ಉತ್ಸವಮೂರ್ತಿ ಶ್ರೀಆಂಜನೇಯಸ್ವಾಮಿ ಹಾಗೂ ರಾಮ, ಲಕ್ಷ್ಮಣ, ಸೀತಾಮಾತೆ ಇವರ ಪ್ರತಿಮೆಗಳಿಗೆ ವಿಶೇಷ ಪೂಜೆ ನಡೆಯಿತು, ಶ್ರೀರಾಮಾಂಜನೇಯಸ್ವಾಮಿ ಭಕ್ತ ಮಂಡಳಿಯ ಪದಾಧಿಕಾರಿಗಳು ಹನುಮ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷವಾಗಿ ಭಾಗವಹಿಸಿ ಪೂಜಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಹನುಮ ಜಯಂತಿ ಪ್ರಯುಕ್ತ ನಗರದ ಪ್ರಮುಖ ರಸ್ತೆಗಳಲ್ಲಿ ಅದ್ದೂರಿ ಮೆರವಣಿಗೆ ನಡೆಯಿತು, ಹಲವಾರು ಜನಪದ ಕಲಾತಂಡಗಳು, ಡಿಜೆ ವಾದ್ಯ ಮೆರವಣಿಗೆಗೆ ಮೆರುಗು ನೀಡಿದವು,

ನಗರದ ನಾಗರೀಕರು ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ದೇವಾಲಯಕ್ಕೆ ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

About The Author

Leave a Reply

Your email address will not be published. Required fields are marked *