
ಹಿರಿಯೂರು:
ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಡಿಸೆಂಬರ್ 10ರ ಬುಧವಾರ 11:00ಗಂಟೆಗೆ ಮಾಸಿಕ ಸಭೆಯನ್ನು ಕರೆಯಲಾಗಿದೆ ಎಂಬುದಾಗಿ ತಾಲ್ಲೂಕು ಯುವ ಘಟಕದ ಅಧ್ಯಕ್ಷರಾದ ಯಳನಾಡು ಆರ್. ಚೇತನ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ಸಭೆಗೆ ತಾಲ್ಲೂಕಿನ ರೈತಸಂಘದ ಎಲ್ಲಾ ಪದಾಧಿಕಾರಿಗಳು, ರೈತಮುಖಂಡರು, ರೈತ ಮಹಿಳೆಯರು, ಎಲ್ಲಾ ಗ್ರಾಮ ಘಟಕದ ಪದಾಧಿಕಾರಿಗಳು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರೈತರ ಕುಂದು ಕೊರತೆಗಳ ಹಾಗೂ ರೈತರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಚರ್ಚೆ ನಡೆಸುವ ಮೂಲಕ ಮುಂದಿನ ಹೋರಾಟಗಳನ್ನು ರೂಪಿಸಲು ಸಲಹೆ-ಸೂಚನೆಗಳನ್ನು ನೀಡಬೇಕು ಎಂಬುದಾಗಿ ಅವರು ಮನವಿ ಮಾಡಿದ್ದಾರೆ.

