March 2, 2026
04

ಹಿರಿಯೂರು:

ನಗರದ ದುರ್ಗಮ್ಮದೇವಿಯ ದೇವಾಲಯದಲ್ಲಿ ನೆಲೆಗೊಂಡಿರುವ ಶ್ರೀಕಾಲಭೈರವೇಶ್ವರ ಸ್ವಾಮಿಯ ಪೂಜಾ ಮಹೋತ್ಸವ ಕಾರ್ಯಕ್ರಮವು ಇದೇ ಡಿಸೆಂಬರ್ 12ರ ಶುಕ್ರವಾರದಂದು ನಡೆಯಲಿದೆ ಎಂಬುದಾಗಿ ದೇವಸ್ಥಾನ ಆಡಳಿತ ಮಂಡಳಿಯು ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದೆ.

ಡಿಸೆಂಬರ್ 12ರ ಶುಕ್ರವಾರ ಸಂಜೆ 6.30ಕ್ಕೆ ಶ್ರೀಕಾಲಭೈರವೇಶ್ವರಸ್ವಾಮಿಗೆ ಮಹಾರುದ್ರಾಭಿಷೇಕ, ಅಲಂಕಾರ ಸೇವೆ, ಪುಷ್ಪಾರ್ಚನೆ, ಕುಂಕುಮಾರ್ಚನೆ, ಮಹಾಮಂಗಳಾರತಿ ಹಾಗೂ ಸಂಜೆ 7 ಗಂಟೆಗೆ ಶ್ರೀಕಾಲಭೈರವೇಶ್ವರ ಸ್ವಾಮಿಗೆ ದಂಪತಿಗಳಿಂದ ತೊಟ್ಟಿಲು ಪೂಜಾ ಸೇವೆ ನಡೆಯಲಿದೆ.

ಡಿಸೆಂಬರ್ 12ರ ಶುಕ್ರವಾರ ಸಂಜೆ 7.30ಕ್ಕೆ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಮತ್ತು ದೀಪೋತ್ಸವ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ ಎಂಬುದಾಗಿ ತಿಳಿದುಬಂದಿದೆ.

ಭಕ್ತಾದಿಗಳು ಸ್ವಾಮಿಗೆ ಮಹಾರುದ್ರಾಭಿಷೇಕ, ಅಲಂಕಾರ ಸೇವೆ, ಪುಷ್ಪಾರ್ಚನೆ, ಕುಂಕುಮಾರ್ಚನೆ, ಪ್ರಸಾದ ವಿನಿಯೋಗವನ್ನು ಮಾಡಲಾಗುವುದು. ಇದೇ ಡಿಸೆಂಬರ್ 12ರ ಶುಕ್ರವಾರ ಬೆಳಗ್ಗೆ 11 ಗಂಟೆಯೊಳಗೆ ಅರ್ಚಕರನ್ನು ಸಂಪರ್ಕಿಸಬೇಕಾಗಿ ವಿನಂತಿ. ಹೆಚ್ಚಿನ ಮಾಹಿತಿಗಾಗಿ 8197227121, 9448534119 ಸಂಪರ್ಕಿಸಬಹುದಾಗಿದೆ.

About The Author

Leave a Reply

Your email address will not be published. Required fields are marked *