March 2, 2026
000001

ಹಿರಿಯೂರು :       

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಅತ್ಯಂತ ಪ್ರತಿಭಾವಂತನಾಗಿದ್ದು, ಇಂತಹ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತಪ್ರತಿಭೆ ಹಾಗೂ ಕ್ರೀಯಾಶೀಲತೆಯನ್ನು ಹೊರಹಾಕುವ ಮೂಲಕ ತಮ್ಮ ಗುರಿಯನ್ನು ಅರ್ಥಮಾಡಿಕೊಳ್ಳಲು ಈ ವೇಷಭೂಷಣ ಸ್ಪರ್ಧೆಗಳು ವಿದ್ಯಾರ್ಥಿಗಳಿಗೆ ಒಂದು ಉತ್ತಮ ವೇದಿಕೆಯನ್ನು ನಿರ್ಮಿಸಿಕೊಡುತ್ತವೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ ಅವರು ಹೇಳಿದರು.

ನಗರದ ನೆಹರು ಮೈದಾನದಲ್ಲಿರುವ ವಾಣಿವಿಲಾಸ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ವೇಷಭೂಷಣ ಸ್ಪರ್ಧೆ” ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಅವರು ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರಗಳನ್ನು ಗುರುತಿಸುವ ಮೂಲಕ ತಮ್ಮ ಕನಸನ್ನು ನನಸಾಗಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ಅವರ ಕನಸನ್ನು ಪೋಷಕರು ಹಾಗೂ ಶಿಕ್ಷಕರೊಂದಿಗೆ ಹಂಚಿಕೊಳ್ಳಲು ವೇದಿಕೆಯನ್ನು ಕಲ್ಪಿಸಲಾಗಿದ್ದು, ಈ ನಿಟ್ಟಿನಲ್ಲಿ “ವೇಷಭೂಷಣ ಸ್ಪರ್ಧೆ”ಯಂತಹ ಕಾರ್ಯಕ್ರಮವನ್ನು ನಮ್ಮ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರಲ್ಲದೆ,

ತಂದೆ-ತಾಯಿಗಳು ನಮ್ಮ ಮಕ್ಕಳು ವೈದ್ಯರು, ಇಂಜಿನಿಯರ್, ವಕೀಲರು, ಪೋಲೀಸರು, ಸೈನಿಕರು, ಕಲಾವಿದರು ಆಗಬೇಕೆಂಬ ಹಲವಾರು ಕನಸುಗಳನ್ನು ಕಾಣುತ್ತಿದ್ದು, ಅವರ ಕನಸುಗಳನ್ನು ನನಸಾಗಿಸುವಲ್ಲಿ ಈ “ವೇಷಭೂಷಣ ಸ್ಪರ್ಧೆ”ಯಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳು ಹಾಗೂ ಮಕ್ಕಳ ಪೋಷಕರಿಗೆ ಹೊಸ ಉತ್ಸಾಹವನ್ನು ನೀಡುತ್ತವೆ ಎಂಬುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ವೇಷಭೂಷಣ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ಶ್ರೀಮತಿ ಸೌಮ್ಯ, ವಿದ್ಯಾಸಂಸ್ಥೆಯ ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಆಡಳಿತಾಧಿಕಾರಿ ಶ್ರೀಮತಿ ಹೇಮಲತಾ, ಕೋ-ಆರ್ಡಿನೇಟರ್ ಶ್ರೀಮತಿ ರಚನ, ಶಿಕ್ಷಕಿಯರುಗಳಾದ ಶ್ರೀಮತಿ ಗಂಗಮ್ಮ, ಶ್ರೀಮತಿ ರಜಿಯಾಬೇಗಂ, ಶ್ರೀಮತಿ ಸಬೀಹಾ, ಶ್ರೀಮತಿ ಸಾಧಿಕಾ, ಶ್ರೀಮತಿ ಮಮತಾ, ಕಾವ್ಯ, ಕಾರ್ಯಕ್ರಮದ ಸಂಯೋಜಕರಾದ ಶ್ರೀಮತಿ ಭಾಗ್ಯ, ಶ್ರೀಮತಿ ಜಯಸುಧಾ, ಶಿಕ್ಷಕರಾದ ಶಿವರಾಜ್, ಸೇರಿದಂತೆ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *