
ಹಿರಿಯೂರು:
ನಗರದ ವ್ಯಾಪ್ತಿಯಲ್ಲಿ ಪ್ರತಿ ಶನಿವಾರ ಸ್ವಚ್ಛತಾ ಇ ಸೇವಾ ಕಾರ್ಯಕ್ರಮದಡಿ “ನಮ್ಮ ಚಿತ್ತ ಸ್ವಚ್ಛತೆಯತ್ತ “ಎಂಬ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅದರಂತೆ ಈ ವಾರ ಹಳೇ ಪಂಪ್ ಹೌಸ್ ಹಾಗೂ ಮತ್ತು ವಾರ್ಡ್ 3ರ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ನಗರಸಭೆ ಪೌರಾಯುಕ್ತರಾದ ಎ.ವಾಸೀಂ ಹೇಳಿದರು.

ನಗರದ ವ್ಯಾಪ್ತಿಯ ವಾರ್ಡ್ ನಂಬರ್ 26 ಮತ್ತು ವಾರ್ಡ್ ನಂಬರ್ 3ರಲ್ಲಿ ಸ್ವಚ್ಛತಾ ಇ ಸೇವಾ ಕಾರ್ಯಕ್ರಮದಡಿ ಹಮ್ಮಿಕೊಳ್ಳಲಾಗಿದ್ದ “ನಮ್ಮ ಚಿತ್ತ ಸ್ವಚ್ಛತೆಯತ್ತ ” ಸ್ವಚ್ಛತಾ ಆಂದೋಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ, ಹಿರಿಯ ಮತ್ತು ಕಿರಿಯ ಆರೋಗ್ಯ ನಿರೀಕ್ಷಕರುಗಳು ಮತ್ತು ದಪ್ಪೇದಾರಗಳು ಹಾಗೂ ಪೌರಕಾರ್ಮಿಕರು, ವಾರ್ಡ್ ನಂಬರ್ 26 ಮತ್ತು ವಾರ್ಡ್ ನಂಬರ್ 3ರ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

