April 21, 2026
00003

ಹಿರಿಯೂರು:                                                               

ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ  ಶಿಕ್ಷಕರ ಸಮರ್ಪಣೆ ಹಾಗೂ ಪಾಲಕರ ಸಹಕಾರ ಶ್ಲಾಘನೀಯವಾಗಿದೆ. ಶಿಕ್ಷಣವೇ ಸಮಾಜದ ಬಲವಾದ ಅಡಿಪಾಯ ಎಂಬ ನಂಬಿಕೆಯಿಂದ , ಮಕ್ಕಳ ಭವಿಷ್ಯ ನಿರ್ಮಾಣಕ್ಕೆ ಇಂತಹ ಕಾರ್ಯಕ್ರಮಗಳು ಪ್ರೇರಣೆಯಾಗಲಿ  ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು.

ತಾಲ್ಲೂಕಿನ ಭೀಮನಬಂಡೆಯ ಯಾಜ್ಞವಲ್ಕ್ಯ ಪಬ್ಲಿಕ್ ಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳ ಪ್ರತಿಭೆ, ಶಿಸ್ತು ಮತ್ತು ಸಾಂಸ್ಕೃತಿಕ ಪ್ರದರ್ಶನಗಳನ್ನು ನೋಡಿ ಸಂತಸ ವ್ಯಕ್ತಪಡಿಸಿದರು.ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರು, ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಶಾಲಾವಾರ್ಷಿಕೋತ್ಸವ ಸಮಾರಂಭದಲ್ಲಿ  ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *