
ಹಿರಿಯೂರು:
ಪ್ರಸ್ತುತ ಕಾಲಘಟ್ಟದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಅವರಂತಹ ದಾರ್ಶನಿಕರ ಚಿಂತನೆಗಳನ್ನು ಇಂದಿನ ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಒಳ್ಳೆಯ ನಡತೆ, ವರ್ತನೆ ಮಾತುಗಾರಿಕೆಯನ್ನು ರೂಢಿಸಿಕೊಂಡು ಸಮಾಜದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂಬುದಾಗಿ ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಸಂಗಮೇಶ್ ಬನ್ನಿ ನಾಯ್ಕರ್ ಅವರು ಹೇಳಿದರು.

ನಗರದ ವೇದಾವತಿ ನಗರದ ಶ್ರೀ ಕೃಷ್ಣ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತು ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ಚಿಂತನ ಮಂಥನ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ಡಾ. ಲೋಲಕ್ಷಮ್ಮ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಸಂಘಗಳ ಪರಿಷತ್ತಿನ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಆರ್.ಈರೇಗೌಡರು, ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರಾದ ಕೆ.ಪಿ.ಎಲ್.ಜಗದೀಶ್ ಯಾದವ್, ಪ್ರಧಾನ ಕಾರ್ಯದರ್ಶಿ, ಜೆ ನಿಜಲಿಂಗಪ್ಪ, ಪದ್ಮ, ಚಂದ್ರಕಲಾ, ರತ್ನಮ್ಮ, ಹನುಮಂತಪ್ಪ, ದಾಸಣ್ಣ, ಶ್ರೀನಿವಾಸ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
