March 2, 2026
00001

ಹಿರಿಯೂರು:

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ‍್ದಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂಬುದಾಗಿ ರಾಜ್ಯ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು.

ತಾಲ್ಲೂಕಿನ ಶ್ರವಣಗೆರೆ  ಗ್ರಾಮದ ದಲಿತ ಕಾಲೋನಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ದಲಿತರ ಸಬಲಿಕರಣಕ್ಕೆ ಶಿಕ್ಷಣ, ಆರೋಗ್ಯ, ಆರ್ಥಿಕ, ರಾಜಕೀಯ ಅವಕಾಶಗಳನ್ನು ಸರ್ಕಾರ ಕಲ್ಪಿಸಿದೆ. ಸರ್ವಸ್ಪರ್ಶಿ ಆಡಳಿತದ ಮೂಲಕ ದೇಶಕ್ಕೆ ಮಾದರಿಯಾದ ಪಂಚಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಇವುಗಳ ಲಾಭ ದೊರೆಯುತ್ತಿದೆ  ಎಂದರಲ್ಲದೆ,

ಹಿರಿಯೂರು ಕ್ಷೇತ್ರದಲ್ಲಿ ದಲಿತ ಸಮುದಾಯ ಕಾಂಗ್ರೆಸ್ ಬೆಂಬಲಿಸಿದ್ದರಿಂದ 3ಬಾರಿ ಶಾಸಕ, ಸಚಿವ ಸ್ಥಾನ ಸಿಕ್ಕಿದೆ. ಎಲ್ಲಾ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಶಕ್ತಿ ಮೀರಿ ಪ್ರಯತ್ನಿಸಿದ್ದೇನೆ. 2008ರಿಂದ ನವ ನಿರ್ಮಾಣಕ್ಕೆ ಸಂಕಲ್ಪ ಮಾಡಿದ್ದರಿಂದ ಹಳ್ಳಿಗಳಲ್ಲಿ ಅಭಿವರದ್ಧಿ ಹೊನಲು ಹರಡಿದೆ ಎಂಬುದಾಗಿ ಅವರು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷೆ ನೂರ್ ಜಾನ್, ಕಾಂಗ್ರೆಸ್ ಮುಖಂಡರುಗಳಾದ ಈರಲಿಂಗೇಗೌಡ, ಎಸ್.ಆರ್.ತಿಪ್ಪೇಸ್ವಾಮಿ, ಚಂದ್ರಶೇಖರ್, ಅಮಾನುಲ್ಲಾ, ಗೌಡಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *