March 2, 2026
00001

ಹಿರಿಯೂರು :

ನಮ್ಮ ಭಾರತ ದೇಶವು ಸರ್ವಧರ್ಮಗಳ ಸಮನ್ವಯತೆಯನ್ನು ಕಾಯ್ದುಕೊಂಡಿರುವ ದೇಶವಾಗಿದ್ದು, ಎಲ್ಲಾ ಧರ್ಮಗಳನ್ನು ಹಾಗೂ ಧರ್ಮೀಯರನ್ನು ಗೌರವಿಸುತ್ತದೆ, ಈ ನಿಟ್ಟಿನಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಬೌದ್ಧ, ಜೈನ ಹೀಗೆ ಎಲ್ಲಾ ಧರ್ಮಗಳನ್ನು ಪ್ರೀತಿಸುವ ಹಾಗೂ ಗೌರವಿಸುವ ಮನೋಭಾವ ಮಕ್ಕಳಲ್ಲಿ ಬೆಳೆಸಬೇಕೆಂಬ ಉದ್ದೇಶದಿಂದ ನಮ್ಮ ಶಾಲೆಯಲ್ಲಿ ಇಂದು “ಕ್ರಿಸ್ ಮಸ್” ಸಂಭ್ರಮಾಚರಣೆಯನ್ನು ಆಚರಿಸಲಾಗುತ್ತಿದೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ ಹೇಳಿದರು.

ನಗರದ ವಾಣಿವಿಲಾಸ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ಕ್ರಿಸ್ ಮಸ್” ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶಿಲುಬೆ ಏರುವಾಗಲೂ ನನ್ನನ್ನು ಶಿಲುಬೆಗೇರಿಸುವ ಜನರಿಗೆ ಕ್ಷಮೆ ನೀಡೆಂದು ಭಗವಂತನಲ್ಲಿ ಪ್ರಾರ್ಥಿಸಿದ ಏಸುಕ್ರಿಸ್ತನ ಸಹನೆ, ಸಂಯಮ, ತಾಳ್ಮೆ ಇಂದಿನ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದು, ವಿದ್ಯಾರ್ಥಿಗಳು ಏಸುಕ್ರಿಸ್ತನ ಜೀವನ ಹಾಗೂ ಬೋಧನೆಗಳನ್ನು ತಿಳಿದು, ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂಬುದಾಗಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಪಿ.ಆರ್.ಸತೀಶ್ ಬಾಬು, ವಿದ್ಯಾಸಂಸ್ಥೆ ಮುಖ್ಯ ಶಿಕ್ಷಕಿ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಆಡಳಿತಾಧಿಕಾರಿ ಶ್ರೀಮತಿ ಹೇಮಲತಾ, ಕೋ-ಆರ್ಡಿನೇಟರ್ ಶ್ರೀಮತಿ ರಚನ, ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ಭಾಗ್ಯ, ಶ್ರೀಮತಿ ಜಯಸುಧಾ, ಪೂಜಾ,  ಶಿವರಾಜ್, ಸೇರಿದಂತೆ ಶಾಲಾ ಸಿಬ್ಬಂದಿಗಳು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *