
ಹಿರಿಯೂರು:
ತಾಲ್ಲೂಕಿನ ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ ಘೋರ ದುರಂತ ಸಂಭವಿಸಿದ್ದು, ಈ ದುರಂತದಲ್ಲಿ ಗಾಯಗೊಂಡವನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಗೆ ದಾಖಲಾದ ಗಾಯಾಳುಗಳನ್ನು ಸಂಸದರಾದ ಗೋವಿಂದಕಾರಜೋಳರವರು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದರಾದ ಗೋವಿಂದಕಾರಜೋಳರವರು ಮೃತರ ಕುಟುಂಬಕ್ಕೆ ಇನ್ನೂ ಹೆಚ್ಚಿನ ಮೊತ್ತವನ್ನು ಕೊಡಬೇಕು. ಗಾಯಾಳುಗಳಿಗೆ ಇನ್ನೂ ಹೆಚ್ಚಿನ ಚಿಕಿತ್ಸೆ ಕೊಡಿಸಬೇಕು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಚಿಕಿತ್ಸೆಯ ಎಲ್ಲಾ ಖರ್ಚು-ವೆಚ್ಚಗಳನ್ನು ರಾಜ್ಯ ಸರ್ಕಾರವೇ ಭರಿಸಬೇಕು ಎಂಬುದಾಗಿ ಅವರು ಆಗ್ರಹಿಸಿದರಲ್ಲದೆ,
ರಸ್ತೆ ಸಾರಿಗೆ ನಿಯಮದ ಬಗ್ಗೆ ಮಾತನಾಡಿದ ಸಂಸದರು ಪರವಾನಗಿ ಇಲ್ಲದ ವಾಹನ ಚಾಲಕರ ಲೈಸೆನ್ಸ್ ಅನ್ನು ಈ ಕೂಡಲೇ ರದ್ದು ಮಾಡಬೇಕು. ಎಲ್ಲಾ ಚಾಲಕರು ರಸ್ತೆ ಸಾರಿಗೆ ನಿಯಮವನ್ನು ತಪ್ಪದೇ ಅನುಸರಿಸಬೇಕು, ಈ ಬಗ್ಗೆ ಸಾರಿಗೆ ಇಲಾಖೆ ಹಾಗೂ ಪೋಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಹೇಳಿದರು.

