March 6, 2026
03

ಹಿರಿಯೂರು:

ನಗರದ ಚಿಕ್ಕಪೇಟೆ ಬಳಿಯಲ್ಲಿರುವ ಶ್ರೀಲಕ್ಷ್ಮಿವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಮುಜರಾಯಿ ಅಧಿಕಾರಿಗಳು ಹಾಗೂ ತಹಶೀಲ್ದಾರ ರಾದ ಎಮ್ ಸಿದ್ದೇಶ್ ಇವರ ನೇತೃತ್ವದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ದೇವಾಲಯವನ್ನು ವಿವಿಧ ಹೂವುಗಳಿಂದ ಅಲಂಕರಿಸಲಾಗಿತ್ತು. ದೇವಾಲಯದ ಪ್ರಧಾನ ಅರ್ಚಕರಾದ ಪ್ರಸನ್ನ ಕುಮಾರ್ ಇವರ ನೇತೃತ್ವದಲ್ಲಿ ದೇವರಿಗೆ ಪಂಚಾಮೃತ ಅಭಿಷೇಕ ಅರ್ಚನೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ನಡೆಯಿತು.

ನಗರದ ಅನೇಕ ಭಕ್ತರು ದೇವಾಲಯಕ್ಕೆ ಬಂದು ಸ್ವಾಮಿಯ ದರ್ಶನ ಭಾಗ್ಯವನ್ನು ಪಡೆದು ದೇವರ ಕೃಪೆಗೆ ಪಾತ್ರರಾದರು .

About The Author

Leave a Reply

Your email address will not be published. Required fields are marked *