March 2, 2026
0000002

ಹಿರಿಯೂರು :

ಭಾರತ ದೇಶದ ಮೊದಲ ಮಹಿಳಾ ಶಿಕ್ಷಕಿ ಎಂದೇ ಹೆಸರು ಮಾಡಿದ ಶ್ರೀಮತಿ ಸಾವಿತ್ರಿಬಾಯಿ ಫುಲೆಯವರು ಮಹಿಳೆಯರ ಶಿಕ್ಷಣಕ್ಕಾಗಿ ಹೋರಾಡಿದ ಧೀಮಂತ ಮಹಿಳೆಯಾಗಿದ್ದಾರೆ, ಅಡುಗೆಮನೆಗೆ ಸೀಮಿತವಾದ ಮಹಿಳೆಯನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ತಮ್ಮ ಪತಿ ಜ್ಯೋತಿಬಾಯಿ ಫುಲೆಯವರೊಂದಿಗೆ ಸೇರಿ, ಹೋರಾಟ ಮಾಡಿದ್ದು, ಅವರ ಹೋರಾಟದ ಫಲವಾಗಿ ಮಹಿಳೆಯರು ಇಂದು ಶಿಕ್ಷಣವಂತರಾಗಿದ್ದಾರೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ ಹೇಳಿದರು.

ನಗರದ ವಾಣಿವಿಲಾಸ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾರತದ ಮೊದಲ ಶಿಕ್ಷಕಿ ಶ್ರೀಮತಿ ಸಾವಿತ್ರಿ ಬಾಯಿ ಫುಲೆಯವರ 195 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಸಾವಿತ್ರಿಬಾಯಿ ಫುಲೆಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ನಂತರ ಅವರು ಮಾತನಾಡಿದರು.

ಶ್ರೀಮತಿ ಸಾವಿತ್ರಿಬಾಯಿ ಫುಲೆಯವರ ಹೋರಾಟದ ಫಲವಾಗಿ ಇಂದಿನ ಸಮಾಜದ ಮಹಿಳೆಯರು ಶಿಕ್ಷಣವಂತರಾಗಿ ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮನ್ನು ಗುರುತಿಸಿಕೊಂಡು ಕೆಲಸ ನಿರ್ವಹಿಸುವ ಮೂಲಕ ಪುರುಷರಿಗೆ ಸಮಾನವಾಗಿ ದುಡಿದು, ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ, ಈ ಸಾಧನೆಗೆ ಸಾವಿತ್ರಿಬಾಯಿ ಫುಲೆಯವರ ಹೋರಾಟವೇ ಕಾರಣವಾಗಿದೆ ಎಂಬುದಾಗಿ ಹೇಳಿದರು.

ಉಪನ್ಯಾಸಕಿ ಶ್ರೀಮತಿ ಗಂಗಮ್ಮ ಮಾತನಾಡಿ, ಸಾವಿತ್ರಿಬಾಯಿಫುಲೆರವರು ಮಹಿಳೆಯರಿಗೆ ಅಸ್ತಿತ್ವವೇ ಇಲ್ಲದ ಅಂದಿನ ಸಂಕಷ್ಟ ಪರಿಸ್ಥಿತಿಯಲ್ಲಿಯೂ, ಸಮಾಜದ ಎಲ್ಲ ಜನರ ವಿರೋಧದ ನಡುವೆಯೂ ದಿಟ್ಟತನದಿಂದ ಹಿಂದುಳಿದ ಮಹಿಳೆಯರ ಶಿಕ್ಷಣಕ್ಕಾಗಿ ಹೋರಾಡಿದ ಮಹಾನ್ ಚೇತನ, ಇವರು ಮಹಿಳೆಯರನ್ನು ಶಿಕ್ಷಣವಂತರಾಗಿ ಮಾಡುವ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿದರು, ಇವರ ಸಾಧನೆ ನಿಜಕ್ಕೂ ಶ್ಲಾಘನೀಯ ಎಂಬುದಾಗಿ ಹೇಳಿದರು.

ಉಪನ್ಯಾಸಕರಾದ ಉಮೇಶ್ ಯಾದವ್ ಮಾತನಾಡಿ, ಸತ್ಯಶೋಧಕ ಸಮಾಜವನ್ನು ಸ್ಥಾಪಿಸುವ ಮೂಲಕ ಸಮಾಜದಲ್ಲಿ ಮಹಿಳೆಯರು ಪುರುಷರಷ್ಟೇ ಪ್ರಬಲರು, ಎಂಬುದನ್ನು ಜ್ಯೋತಿಬಾಫುಲೆ ದಂಪತಿಗಳು ಸಾಬೀತು ಪಡಿಸಿದ್ದಾರೆ, ಸಮಾಜದಲ್ಲಿರುವ ಮೂಢನಂಬಿಕೆಗಳು, ಅಸಮಾನತೆ, ಜಾತಿವ್ಯವಸ್ಥೆಯನ್ನು ತೊಡೆದುಹಾಕುವಲ್ಲಿ ಹಗಲಿರುಳು ಹೋರಾಡುವ ಮೂಲಕ ಮಹಿಳೆಯರು ಶಿಕ್ಷಣವಂತರಾಗಲು ಶ್ರಮಿಸಿದರು ಎಂಬುದಾಗಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ಪತ್ರಕರ್ತರಾದ ಗೋಸಿಕೆರೆ ರಂಗನಾಥ್, ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಆಡಳಿತಾಧಿಕಾರಿ ಶ್ರೀಮತಿ ಹೇಮಲತಾ, ಕೋ-ಆರ್ಡಿನೇಟರ್ ಶ್ರೀಮತಿ ರಚನಾ, ಶಿಕ್ಷಕಿಯರುಗಳಾದ ಶ್ರೀಮತಿ ರಜಿಯಾಬೇಗಂ, ಶ್ರೀಮತಿ ರಂಜಿತಾ, ಶ್ರೀಮತಿ ಸಬಿಹಾ, ಶ್ರೀಮತಿ ಮುಬೀನಾ, ಶ್ರೀಮತಿ ಸಾದಿಕಾ, ಶ್ರೀಮತಿ ಮಮತಾ, ಕಾವ್ಯ, ರಂಜಿತಾ, ಶ್ರೀಮತಿ ದ್ರಾಕ್ಷಾಯಣಿ, ಶ್ರೀಮತಿ ಅಕ್ಷಿತಾ, ಶ್ರೀಮತಿ ಸುಲೋಚನಾ, ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ಭಾಗ್ಯ, ಶ್ರೀಮತಿ ಜಯಸುಧಾ, ಪೂಜಾ, ಶಿಕ್ಷಕರುಗಳಾದ ಉಮೇಶ್ ಯಾದವ್, ಶಿವರಾಜ್ ನಾಯಕ ಸೇರಿದಂತೆ ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *