
ಹಿರಿಯೂರು:
ಸದ್ಯದಲ್ಲೇ ರಾಜ್ಯಾದ್ಯಂತ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕ್ಷೇತ್ರಗಳನ್ನು ಹೊಸದಾಗಿ ವಿಂಗಡಣೆಯಾಗಿರುವ ಮೂರು ಪ್ರವರ್ಗಗಳಿಗೆ ಅನುಗುಣವಾಗಿ ನಿಗದಿಪಡಿಸಬೇಕು ಎಂಬುದಾಗಿ ರಾಜ್ಯ ದೊಂಬರ ಸಂಘದ ಉಪಾಧ್ಯಕ್ಷರಾದ ಡಿ.ಸಿ.ಪಾಣಿ ಒತ್ತಾಯಿಸಿದ್ದಾರೆ.
ಪತ್ರಿಕಾ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಪರಿಶಿಷ್ಟ ಜಾತಿಗೆ ಸಾಮಾಜಿಕ ನ್ಯಾಯ ಸಿಗಬೇಕಾದರೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೊಸದಾಗಿ ವಿಂಗಡಣೆಯಾಗಿರುವ ಮೂರು ಪ್ರವರ್ಗಗಳಿಗೆ ಅನುಗುಣವಾಗಿ ಮೀಸಲಾತಿಯನ್ನು ಕಲ್ಪಿಸಬೇಕು ಎಂಬುದಾಗಿ ಈ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.
