March 2, 2026
0003

ಹಿರಿಯೂರು:

ಇಂದಿನ ಯುವಪೀಳಿಗೆ ಮಾದಕ ತಂಬಾಕು, ಗುಟಕಾ ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿರುವುದರ ಜೊತೆಗೆ ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ತುತ್ತಾಗುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ತಂಬಾಕು ಮಾರಾಟವನ್ನು ನಿಷೇದಿಸಿದ್ದರೂ, ಅಂಗಡಿಗಳಲ್ಲಿ ಮಾಲೀಕರು ಕಾನೂನಿಗೆ ವಿರುದ್ಧವಾಗಿ ತಂಬಾಕು ಮಾರಾಟ ಮಾಡುತ್ತಿದ್ದಾರೆ ಎಂಬುದಾಗಿ ಆರೋಗ್ಯ ಇಲಾಖೆ ಅಧಿಕಾರಿ ಪ್ರಭು ಹೇಳಿದರು.

ನಗರದ ನಗರ ವ್ಯಾಪ್ತಿಯಲ್ಲಿನ ಎಲ್ಲಾ ಅಂಗಡಿಗಳಲ್ಲಿ ಆರೋಗ್ಯ ಇಲಾಖೆ ವತಿಯಿಂದ ತಂಬಾಕು ಅನಧಿಕೃತ ಮಾರಾಟದ ಕುರಿತು ಪರಿಶೀಲನೆ ನಡೆಸಿ, ತಂಬಾಕು ಮಾರಾಟಗಾರರ ವಿರುದ್ಧ ಕೇಸ್ ದಾಖಲಿಸಿ, ನಂತರ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ನಗರದ ಅಂಗಡಿಗಳಲ್ಲಿ ತಂಬಾಕು ಮಾರಾಟ ಮಾಡುತ್ತಿರುವ ಒಟ್ಟು 38 ಅಂಗಡಿಗಳ ಮೇಲೆ ಕೇಸ್ ಹಾಕಿ, ಒಟ್ಟು 4,ಸಾವಿರ ರೂಗಳನ್ನು ಸಂಗ್ರಹಿಸಿಲಾಯಿತು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಅಧಿಕಾರಿ ಪ್ರಭು ಮತ್ತು ಹಿರಿಯ ಆರೋಗ್ಯ ನಿರೀಕ್ಷಕರಾದ ಹೆಚ್.ಟಿ.ಸುನೀಲ್ ಕುಮಾರ್ ಹಾಗೂ ಕಿರಿಯ ಆರೋಗ್ಯ ನಿರೀಕ್ಷಕರಾದ ಮಹಾಲಿಂಗರಾಜು  ಅವರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *