
ಹಿರಿಯೂರು:
ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯೂರು ತಾಲ್ಲೂಕು ಘಟಕದ ವತಿಯಿಂದ ಧಾರವಾಡದಲ್ಲಿ ನಡೆಯುತ್ತಿರುವ ಕೃಷಿಮೇಳ ಕಾರ್ಯಕ್ರಮಕ್ಕೆ ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ಪ್ರಯಾಣ ಹೊರಟಿದ್ದೇವೆ ಎಂಬುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ವಿಭಾಗೀಯ ಉಪಾಧ್ಯಕ್ಷರಾದ ಕೆ.ಸಿ.ಹೊರಕೇರಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತಸಂಘದ ರಾಜ್ಯ ವಿಭಾಗೀಯ ಉಪಾಧ್ಯಕ್ಷರಾದ ಕೆ.ಸಿ.ಹೊರಕೇರಪ್ಪ, ತಾಲ್ಲೂಕು ಅಧ್ಯಕ್ಷ ಬ್ಯಾಡರಹಳ್ಳಿಶಿವಕುಮಾರ್, ಕಾರ್ಯಾಧ್ಯಕ್ಷ ಹೆಚ್.ದಸ್ತಗಿರಿಸಾಬ್, ಜಿಲ್ಲಾ ಉಪಾಧ್ಯಕ್ಷರಾದ ಎಂ.ಲಕ್ಷ್ಮಿಕಾಂತ್, ಬಿ.ಡಿ.ಶ್ರೀನಿವಾಸ್, ತಾಲ್ಲೂಕು ಉಪಾಧ್ಯಕ್ಷ ಮೇಟಿಕುರ್ಕೆತಿಪ್ಪೇಸ್ವಾಮಿ, ಮಲ್ಲೇಣು ನಾಗರಾಜ್, ರುದ್ರಪ್ಪ, ಯಳನಾಡುಸತ್ಯನಾರಾಯಣ, ಮಲ್ಲಪ್ಪನಹಳ್ಳಿಮುನಿಸ್ವಾಮಿ, ಕೃಷಿ ಅಧಿಕಾರಿ ವೆಂಕಟೇಶ್ ಸೇರಿದಂತೆ ಅನೇಕ ರೈತಮುಖಂಡರು ಉಪಸ್ಥಿತರಿದ್ದರು.

