
ಹಿರಿಯೂರು:
ಸಾವಿತ್ರಿಬಾಯಿಫುಲೆ ಶಿಕ್ಷಕಿಯರ ಸಂಘವು, ಮಹಿಳೆಯರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಜೊತೆಗೆ ಶಿಕ್ಷಣವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಮಹತ್ತರ ಉದ್ದೇಶ ಹೊಂದಿದ್ದು, ಈ ಉದ್ದೇಶ ಸಾಧನೆಗೆ ಹಲವು ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ಸಾವಿತ್ರಿಬಾಯಿಫುಲೆ ಶಿಕ್ಷಕಿಯರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾದ ಶ್ರೀಮತಿ ಆರ್.ಎ.ಸ್ವಪ್ನ ಹೇಳಿದರು.
ನಗರದ ಸಿದ್ದೇಶ್ವರ ಬುದ್ಧಿಮಾಂದ್ಯ ವಸತಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ 195ನೇ ಮಾತೆ ಸಾವಿತ್ರಿಬಾಯಿ ಪುಲೆಯವರ ಜನ್ಮದಿನಚಾರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಿಕಟ ಪೂರ್ವ ಅಧ್ಯಕ್ಷರಾದ ಶ್ರೀಮತಿ ಲೋಕಮ್ಮ ಮಾತನಾಡಿ, ಸಾವಿತ್ರಿಬಾಯಿಫುಲೆ ಶಿಕ್ಷಕಿಯರ ಸಂಘವನ್ನು ಸ್ಥಾಪಿಸುವ ಮೂಲಕ ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದ್ದು, ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂಬುದಾಗಿ ಹೇಳಿದರು.
ಕಾರ್ಯಕ್ರಮದ ಮೊದಲಿಗೆ ಮಾತೆ ಸಾವಿತ್ರಿಬಾಯಿ ಫುಲೆಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಲಾಯಿತು. ನಂತರ ಶ್ರೀಮತಿ ರೇಣುಕಮ್ಮ ಸಹ ಶಿಕ್ಷಕಿಯವರು ಪ್ರಾರ್ಥನೆಯನ್ನು ನೆರವೇರಿಸಿದರು. ತದನಂತರ ನಿರ್ಮಲ ಹೆಚ್.ಆರ್.ಸ್ವಾಗತ ಭಾಷಣ ನಡೆಸಿಕೊಟ್ಟರು.

ನಂತರ ಚೇತನ್ ಸಹ ಶಿಕ್ಷಕರು ವಿಶೇಷ ಅಗತ್ಯವುಳ್ಳ ಮಕ್ಕಳ ಸವಾಲುಗಳ ಕುರಿತು ಮಾಹಿತಿ ನೀಡಿದರು. ನಂತರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀಮತಿ ಗಾಯತ್ರಿ ಮುಖ್ಯ ಶಿಕ್ಷಕರು ಮಕ್ಕಳ ಕಲಿಕೆಯ ಅವಕಾಶಗಳು ಮತ್ತು ಸಾಧನೆ ಕುರಿತು ಮಾತನಾಡಿದರು.ನಮ್ಮ ಸಂಘದ ವತಿಯಿಂದ ಇವರನ್ನು ಸನ್ಮಾನಿಸಲಾಯಿತು. ನಮ್ಮ ಸಂಘದ ಕಾರ್ಯ ಚಟುವಟಿಕೆಗಳ ಕುರಿತು ಮೆಚ್ಚುಗೆಯನ್ನು ಕೂಡ ಇವರು ವ್ಯಕ್ತಪಡಿಸಿದರು. ನಂತರದಲ್ಲಿ ಮಕ್ಕಳಿಗೆ ಸಿಹಿ ಊಟವನ್ನು ನೀಡಲಾಯಿತು
ಈ ಕಾರ್ಯಕ್ರಮದಲ್ಲಿ ಹಿರಿಯೂರು ತಾಲ್ಲೂಕಿನ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸದಸ್ಯರು ಸಿದ್ದೇಶ್ವರ ಬುದ್ದಿಮಾಂದ್ಯ ವಸತಿ ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮಕ್ಕಳು ಭಾಗವಹಿಸಿದ್ದರು. ಪದಾಧಿಕಾರಿಗಳಾದ ತಿಪ್ಪಮ್ಮ, ರತ್ನಮ್ಮ, ಗಂಗಮ್ಮ , ಸಾವಿತ್ರಮ್ಮ, ಮಮತಾ, ಜ್ಯೋತಿ ಜೋಶಿ ಉಪಸ್ಥಿತರಿದ್ದರು. ನಂತರದಲ್ಲಿ ಉರ್ದು ಸಂಘದ ಅಧ್ಯಕ್ಷರಾದ ಖುಷ್ಣೋದ ರವರು ಕಾರ್ಯಕ್ರಮವನ್ನು ನಿರೂಪಿಸಿದರು.ಶ್ರೀಮತಿ ಮೆಹಬೂಬಿ ಕಾರ್ಯಕ್ರಮದಲ್ಲಿ ಸರ್ವರಿಗೂ ವಂದನಾರ್ಪಣೆ ನೆರವೇರಿಸಿದರು.

