March 2, 2026
0001

ಹಿರಿಯೂರು:

ತಾಲ್ಲೂಕಿನ  ಹಿಂಡಸಕಟ್ಟೆ ಸಮೀಪದಲ್ಲಿ ಭೀಕರ  ರಸ್ತೆ ಅಪಘಾತದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿರುವ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ಬೀದರ್ ಶ್ರೀರಂಗಪಟ್ಟಣ ರಾಜ್ಯಹೆದ್ದಾರಿಯಲ್ಲಿ  ಭೀಕರ ಅಪಘಾತವೊಂದು ಸಂಭವಿಸಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ  ಕಾರಿನಲ್ಲಿದ್ದ  ನಾಲ್ವರು ಸಾವನ್ನಪ್ಪಿರುವ  ಘಟನೆ ನಡೆದಿದೆ.

ವಿಶ್ವನಾಥ್(22), ನಂಜುಡಿ(23), ರಾಹುಲ್(23) ಮತ್ತು ಯಶ್ವಂತ್ (22) ಮೃತರು ಎಂದು ಗುರುತಿಸಲಾಗಿದೆ. ಮೃತರು ಹಿರಿಯೂರು ತಾಲ್ಲೂಕಿನ  ನಂಜಯ್ಯನ ಕೊಟ್ಟಿಗೆ ಗ್ರಾಮದವರು ಎನ್ನಲಾಗಿದೆ. ಹಿರಿಯೂರು ಗ್ರಾಮಾಂತರ ಠಾಣೆ ಸಿ.ಪಿ.ಐ ಆನಂದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ  ಮಾಡಿದ್ದಾರೆ.

About The Author

Leave a Reply

Your email address will not be published. Required fields are marked *