March 2, 2026
00002

ಹಿರಿಯೂರು:

ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ದೇಶದ ಸತ್ಪ್ರಜೆಗಳನ್ನಾಗಿ ಮಾಡಬೇಕು. ಶಿಕ್ಷಣದ ಜೊತೆಗೆ ಶಿಸ್ತು, ಮೌಲ್ಯಗಳು ಹಾಗೂ ಸಂಸ್ಕಾರಗಳನ್ನು ಬೆಳೆಸುವಲ್ಲಿ ತಾಹಾ ವಿದ್ಯಾಸಂಸ್ಥೆ ನೀಡುತ್ತಿರುವ ಕೊಡುಗೆ ಶ್ಲಾಘನೀಯವಾಗಿದೆ ಎಂಬುದಾಗಿ  ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು.

ನಗರದ ತಾಹಾ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ  ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಲಾಗುವುದು. ಎಂದರಲ್ಲದೆ, ಈ ಸಂದರ್ಭದಲ್ಲಿ ಮಕ್ಕಳ ಪ್ರತಿಭೆಯನ್ನು ಬೆಳೆಸಲು ಶ್ರಮಿಸುತ್ತಿರುವ ಶಿಕ್ಷಕರು ಹಾಗೂ ಪೋಷಕರಿಗೆ ಅಭಿನಂದನೆಗಳು ಎಂಬುದಾಗಿ ಅವರು ಹೇಳಿದರು.

 ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಬಿ.ಎಸ್. ನವಾಬ್ ಸಾಬ್ ಅವರು ಮಾತನಾಡಿ ನಮ್ಮ ಶಾಲೆಯಲ್ಲಿ ಉ್ತಮ ಹಾಗೂ ನುರಿತ ಶಿಕ್ಷಕರಿದ್ದಾರೆ. ಸುಸಜ್ಜಿತ ವಿಜ್ಞಾನ ಪ್ರಯೋಗಾಲಯ , ಆಟದ ಮೈದಾನಗಳಿವೆ.  ಮಕ್ಕಳ ಶಿಕ್ಷಣಕ್ಕೆ ಪೂರಕವಾದ ವಾತಾವರಣವಿದೆ ಎಂಬುದಾಗಿ ಅವರು ಹೇಳಿದರು.

ಮುಖಂಡರಾದ ಪಿ.ಎಸ್.ಸಾದತ್ ಅವರು ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಬೇಕು. ಯಾವ ವಿದ್ಯಾರ್ಥಿ ಕೂಡ ಶಿಕ್ಷಣದಿಂದ ವಂಚಿತವಾಗಬಾರದು  ಶಿಕ್ಷಣವೇ  ಶಕ್ತಿ ಎಂಬುದನ್ನು ಅರಿಯಬೇಕು  ಎಂಬುದಾಗಿ ಅವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತರಾದ ಎ.ವಾಸೀಂ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಆರೀಫ್, ಬ್ಲಾಕ್ ಕಾಂಗ್ರೆಸ್  ಸಮಿತಿ ಅಧ್ಯಕ್ಷರಾದ ಖಾದಿ ರಮೇಶ್, ಕಾಂಗ್ರೆಸ್ ಮುಖಂಡರಾದ  ಶಿವಕುಮಾರ್, ಜ್ಞಾನೇಶ್, ಗುರುಪ್ರಸಾದ್, ಮಹಮ್ಮದ್ ನಾಜೀಮ್, ಮೊಮ್ಮದ್ ನಯಾಜ್, ಜೆ.ದಾದಾಪೀರ್, ಇ.ಸಿ.ಒ.ಜಾಫರ್, ಮಹಮ್ಮದ್ ನಿಜಾಮ್, ಮುಖ್ಯ ಶಿಕ್ಷಕರಾದ ಉಮೇಶ್, ಸಲಹೆಗಾರರಾದ  ಶಬ್ಬೀರ್, ಸಿಬ್ಬಂದಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *