March 2, 2026
00005

ಹಿರಿಯೂರು:

ತಾಲ್ಲೂಕಿನ ವೀರವ್ವ ನಾಗತಿಹಳ್ಳಿ ಗ್ರಾಮಕ್ಕೆ ಜವನಗೊಂಡನಹಳ್ಳಿ  ಕ್ಷೇತ್ರದ  ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಸಿ.ಬಿ.ಪಾಪಣ್ಣ ಅವರು ಭೇಟಿ ನೀಡಿ ಗ್ರಾಮದ ಶ್ರೀಆಂಜನೇಯಸ್ವಾಮಿ ದೇವಸ್ಥಾನ ಕಾಮಗಾರಿ ಪ್ರಗತಿಯನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಶ್ರೀಆಂಜನೇಯ ಸ್ವಾಮಿಯ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಗೆ 25 ಸಾವಿರ ರೂಗಳ ದೇಣಿಗೆಯನ್ನು ನೀಡಿ,  ಶ್ರೀಆಂಜನೇಯಸ್ವಾಮಿಗೆ ವಿಶೇಷವಾದ ಪೂಜೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *