March 2, 2026
617844871_2040733116781350_1815323521005175980_n

ಹಿರಿಯೂರು :

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳ ಸೃಜನಶೀಲತೆ ಹಾಗೂ ಕ್ರೀಯಾಶೀಲತೆಯನ್ನು ಹೆಚ್ಚಿಸಲು ಶಾಲೆಗಳಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ವಸ್ತುಪ್ರದರ್ಶನವನ್ನು ಏರ್ಪಡಿಸುವುದು ಅತ್ಯಗತ್ಯವಾಗಿದೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಆಲೂರು ಹನುಮಂತರಾಯಪ್ಪ ಹೇಳಿದರು.

ನಗರದ ನೆಹರು ಕ್ರೀಡಾಂಗಣದಲ್ಲಿನ ವಾಣಿವಿಲಾಸ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ಏರ್ಪಡಿಸಲಾಗಿದ್ದ “ಆಕರ್ಷಕವಸ್ತುಪ್ರದರ್ಶನ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಪ್ರತಿಯೊಬ್ಬ ಮಗುವೂ ಬಹಳ ಪ್ರತಿಭಾವಂತನಾಗಿದ್ದು, ಈವಸ್ತುಪ್ರದರ್ಶನದಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಕೌಶಲ್ಯವನ್ನು ಅಭಿವೃದ್ಧಿಪಡಿಸುವುದರ ಜೊತೆಗೆ, ಬೌದ್ಧಿಕಮಟ್ಟವನ್ನು ಹೆಚ್ಚಿಸುತ್ತದೆ, ಅವರಲ್ಲಿ ಸುಪ್ತವಾಗಿ ಅಡಗಿರುವ ಬುದ್ಧಿಶಕ್ತಿ, ಕೌಶಲ್ಯ ಹಾಗೂ ಪ್ರತಿಭೆಯನ್ನು ಹೊರತರುವಲ್ಲಿ ಮಕ್ಕಳ ಪೋಷಕರು ಹಾಗೂ ಶಿಕ್ಷಕರು ಆಸಕ್ತಿವಹಿಸಬೇಕಿದೆ ಎಂದರಲ್ಲದೆ,

ಈ ನಿಟ್ಟಿನಲ್ಲಿ ನಮ್ಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಮುಂಚಿತವಾಗಿ ಆಕರ್ಷಕ ವಸ್ತುಪ್ರದರ್ಶನ ಕಾರ್ಯಕ್ರಮ ನಡೆಸುವ ಮೂಲಕ, ಈ ವಸ್ತು ಪ್ರದರ್ಶನದಲ್ಲಿ ಅತ್ಯುತ್ತಮ ವಸ್ತುಗಳ ಮಾದರಿ ತಯಾರಿಸಿ, ಪ್ರದರ್ಶಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ, ಪ್ರಥಮ, ದ್ವಿತೀಯ, ಹಾಗೂ ತೃತೀಯ ಬಹುಮಾನಗಳನ್ನು ವಿತರಿಸಲಾಗುತ್ತದೆ ಎಂಬುದಾಗಿ ಅವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ವಾಣಿವಿಲಾಸ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕರಾದ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಆಡಳಿತಾಧಿಕಾರಿ ಶ್ರೀಮತಿ ಹೇಮಲತಾ, ಕೋಆರ್ಡಿನೇಟರ್ ಶ್ರೀಮತಿ ರಚನಾ, ಶಿಕ್ಷಕರಾದ ಉಮೇಶ್ ಯಾದವ್, ಶಿವರಾಜ್ ನಾಯ್ಕ, ಶಿಕ್ಷಕಿಯರುಗಳಾದ, ಶ್ರೀಮತಿ ರಜಿಯಾ, ಶ್ರೀಮತಿ ಗಂಗಮ್ಮ, ಶ್ರೀಮತಿ ರಂಜಿತಾ, ಶ್ರೀಮತಿ ಸಬೀಹಾ, ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ಭಾಗ್ಯ, ಪೂಜಾ, ಸೇರಿದಂತೆ ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *