
ಹಿರಿಯೂರು :
ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ವಾಣಿವಿಲಾಸ ವಿದ್ಯಾಸಂಸ್ಥೆಯ 2025-26 ನೇ ಸಾಲಿನ ಶಾಲಾವಾರ್ಷಿಕೋತ್ಸವ ಸಮಾರಂಭವನ್ನು ಜನವರಿ 24 ರ ಶನಿವಾರದಂದು ನಗರದ ತನ್ಯಾಸಿ ಗೌಂಡರ್ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ 2-30 ರಿಂದ ಸಂಜೆ 5-30 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಆಲೂರು ಹನುಮಂತರಾಯಪ್ಪ ತಿಳಿಸಿದ್ದಾರೆ.
ಈ ಕಾರ್ಯಕ್ರಮವನ್ನು ಕೋಡಿಹಳ್ಳಿ ಆದಿಜಾಂಬವ ಮಹಾಸಂಸ್ಥಾನ ಬೃಹನ್ಮಠದ ಶ್ರೀಶ್ರೀ ಷಡಕ್ಷರಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಿ, ಕಾರ್ಯಕ್ರಮ ಉದ್ಘಾಟಿಸಲಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿವಿಲಾಸ ವಿದ್ಯಾಸಂಸ್ಥೆ ಅಧ್ಯಕ್ಷರು ಹಾಗೂ ಜಿ.ಪಂ.ಮಾಜಿ ಅಧ್ಯಕ್ಷರಾದ ಶ್ರೀಯುತ ಬಿ.ಎಸ್.ರಘುನಾಥ್ ವಹಿಸಲಿದ್ದಾರೆ.
ಸಮಾರಂಭಕ್ಕೆ ಮುಖ್ಯಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ, ಪೌರಾಯುಕ್ತರಾದ ಎ.ವಾಸೀಂ, ಪೋಲೀಸ್ ನಿರೀಕ್ಷಕರಾದ ಮಹಮದ್ ಸಿರಾಜ್, ಶಿಕ್ಷಣ ಸಂಯೋಜಕರಾದ ಜಾಫರ್,ಸೇರಿದಂತೆ ವಿಶೇಷ ಆಹ್ವಾನಿತರಾಗಿ ರೆಡ್ ಕ್ರಾಸ್ ಸಂಸ್ಥೆ ನಿರ್ದೇಶಕರಾದ ಶ್ರೀಮತಿ ಶಶಿಕಲಾರವಿಶಂಕರ್, ಮನವಿ ಟ್ರಸ್ಟ್ ಅಧ್ಯಕ್ಷರಾದ ಶ್ರೀಮತಿಮಾನಸ ಮಂಜುನಾಥ್ ರವರು ಆಗಮಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ನಮ್ಮ ವಿದ್ಯಾಸಂಸ್ಥೆಯ ಮಕ್ಕಳ ಎಲ್ಲಾ ಪೋಷಕರು ಹಾಗೂ ನಮ್ಮ ಹಿತೈಷಿಗಳು ಹಾಗೂ ಆತ್ಮೀಯರು ಆಮಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂಬುದಾಗಿ ವಿದ್ಯಾಸಂಸ್ಥೆ ಕಾರ್ಯದರ್ಶಿಗಳಾದ ಆಲೂರುಹನುಮಂತರಾಯಪ್ಪ ಹಾಗೂ ವಿದ್ಯಾಸಂಸ್ಥೆಯ ಖಜಾಂಚಿಗಳಾದ ಆರ್.ವಸಂತ್ ಕುಮಾರ್ ಮನವಿ ಮಾಡಿದ್ದಾರೆ.

