
ಹಿರಿಯೂರು:
ಚಿತ್ರದುರ್ಗ ಜಿಲ್ಲೆಯ ಬಯಲುಸೀಮೆಗೆ ನೀರು ಹರಿಸುವ ವಿಚಾರವಾಗಿ ಸರ್ಕಾರದ ಧೋರಣೆಯನ್ನು ಖಂಡಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಫೆಬ್ರವರಿ 4ರಂದು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿ, ಫೆಬ್ರವರಿ 10ರಂದು ಹಿರಿಯೂರ್ ಬಂದ್ ಗೆ ಕರೆ ಕೊಡಲಾಗುವುದು ರೈತ ಸಂಘದ ಜಿಲ್ಲಾಧ್ಯಕ್ಷರಾದ ಕೆ. ಟಿ. ತಿಪ್ಪೇಸ್ವಾಮಿ ಅವರು ಹೇಳಿದರು.
ನಗರದ ತಾಲ್ಲೂಕು ರೈತ ಸಂಘದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಫೆಬ್ರವರಿ 12 ರಂದು ಹಿರಿಯೂರಿನಿಂದ ಚಿತ್ರದುರ್ಗಕ್ಕೆ ಫೆಬ್ರವರಿ 13 ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಸಮಾವೇಶ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಎಂದರಲ್ಲದೆ,
ಕೇಂದ್ರಸರ್ಕಾರ ಘೋಷಿಸಿರುವ 5300 ಕೋಟಿ ಹಣ ಕೊಡದೆ ಬಿಡುಗಡೆಗೊಳಿಸಬೇಕು. ರಾಜ್ಯ ಸರ್ಕಾರ ಬರುವ ಬಜೆಟ್ ನಲ್ಲಿ 5000 ಕೋಟಿ ಮೀಸಲಿಡಬೇಕು.ಕಲ್ವಳ್ಳಿ ಭಾಗದ 16 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪ್ರಾರಂಭಿಸಬೇಕು.

ಅಲ್ಲದೆ, ಐಮಂಗಲ ಹಾಗೂ ಕಸಬಾ ಹೋಬಳಿಯ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯನ್ನು ಪ್ರಾರಂಭಿಸಬೇಕು. ಧರ್ಮಪುರ ಹೋಬಳಿಯ ಬಿಟ್ಟು ಹೋಗಿರುವ ಕೆರೆಗಳಿಗೆ ಹಣ ಮೀಸಲಿಟ್ಟು ಕಾಮಗಾರಿ ಪ್ರಾರಂಭಿಸಬೇಕು ಮತ್ತು ಜಿಲ್ಲೆಯ ಎಲ್ಲಾ ಕೆರೆಗಳಿಗೂ ನೀರು ತುಂಬಿಸಬೇಕು ಎಂದು ನಿರಂತರ ಹೋರಾಟ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂಬುದಾಗಿ ಅವರು ಹೇಳಿದರು.
ಇದೇ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷರಾಗಿ ಬಳಗಟ್ಟೆ ಸಿ.ವೆಂಕಟೇಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಆಲೂರುಸಿದ್ದರಾಮಣ್ಣ ಅವರನ್ನು ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ರಂಗಸ್ವಾಮಿಹಳ್ಳಿಕೆರೆ, ತಿಪ್ಪೇಸ್ವಾಮಿ, ಸಣ್ಣತಿಮ್ಮಣ್ಣ, ಬಳಗಟ್ಟೆತಿಮ್ಮಯ್ಯ, ಮಂಜನಾಯಕ್, ವೀರಣ್ಣಗೌಡ, ವಿರೂಪಾಕ್ಷ, ರಾಮಣ್ಣ, ಮೀಸೆಗೌಡಪ್ಪ, ಬಾಲಕೃಷ್ಣ, ಮಂಜುನಾಥ, ಶಿವಣ್ಣ, ಸಣ್ಣೀರಪ್ಪ, ನಿಂಗಪ್ಪ, ರಾಮಕೃಷ್ಣ, ಚಂದ್ರಪ್ಪ, ವೆಂಕಟೇಶ್ ಗುಡಿಹಳ್ಳಿ, ಟಿ.ತಿಮ್ಮಯ್ಯ, ಗೋವಿಂದಪ್ಪ, ಕರಿಯಪ್ಪ ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.
