
ಹಿರಿಯೂರು :
ಭಾರತ ದೇಶದ ಸ್ವಾತಂತ್ರ್ಯದ ನಂತರ ದೇಶದಲ್ಲಿನ ಎಲ್ಲಾ ಪ್ರದೇಶಗಳನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಗ್ಗೂಡಿಸಿ, ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ಜಾರಿಗೆ ತಂದ ಈ ದಿನವನ್ನು ಗಣರಾಜ್ಯೋತ್ಸವದಿನವಾಗಿ ಆಚರಿಸಲಾಗುತ್ತಿದೆ, ಗಣರಾಜ್ಯೋತ್ಸವದ ದಿನವನ್ನು ನಾವೆಲ್ಲರೂ ಸಂತಸ ಹಾಗೂ ಸಂಭ್ರಮದಿಂದ ಆಚರಿಸಬೇಕು ಎಂಬುದಾಗಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಿ.ಎಸ್.ರಘುನಾಥ್ ಹೇಳಿದರು.

ತಾಲ್ಲೂಕಿನ ಹರಿಯಬ್ಬೆ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿಗಳಿಂದ ಪತಚಂಚಲನ ಆಕರ್ಷಕವಾಗಿ ಮೂಡಿಬಂದಿತು ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ಕಾರ್ಯಕ್ರಮದಲ್ಲಿ ಲೇಜಿಮ್ಸು, ಡಂಬಲ್ಸ್ ಹಾಗೂ ರಿಂಗ್ ಗಳಿಂದ ಆಕರ್ಷಕ ನೃತ್ಯ ರೂಪಕ ಮೂಡಿಬಂದಿತು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಎಸ್.ಕುಮಾರಯ್ಯ, ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ರುದ್ರಮುನಿ ಮತ್ತು ಕಾಲೇಜು ಅಭಿವೃದ್ಧಿ ಉಪಾಧ್ಯಕ್ಷರಾದ ಗೋವಿಂದರಾಜು, ಊರಿನ ಹಿರಿಯರು ಮತ್ತು ಶಿಕ್ಷಕವೃಂದದವರು ಭಾಗವಹಿಸಿದ್ದರು.
