
ಹಿರಿಯೂರು :
ಜನವರಿ 10 ರಂದು ರಾತ್ರಿ ಇಂಡಸಕಟ್ಟೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ಹಿರಿಯೂರು ನಗರದ ನಂಜಯ್ಯನ ಕೊಟ್ಟಿಗೆಯ ನಾಲ್ವರು ಯುವಕರು ದುರಂತವಾಗಿ ಪ್ರಾಣ ಕಳೆದುಕೊಂಡಿದ್ದರು. ಈ ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕರ ಕುಟುಂಬಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರು ವೈಯಕ್ತಿಕವಾಗಿ ತಲಾ 1ಲಕ್ಷ ರೂಗಳ ಪರಿಹಾರ ಧನವನ್ನು ವಿತರಿಸಿದರು.
ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರು ಮಾತನಾಡಿ, ಇಂತಹ ದುರ್ಘಟನೆಗಳು ಮರುಕಳಿಸದಂತೆ ಎಲ್ಲರೂ ರಸ್ತೆ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಆ ಭಗವಂತ ಮೃತರ ಆತ್ಮಕ್ಕೆ ಶಾಂತಿ, ಶೋಕತಪ್ತ ಕುಟುಂಬಗಳಿಗೆ ಧೈರ್ಯವನ್ನು ನೀಡಬೇಕು ಎಂಬುದಾಗಿ ದೇವರಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಶಿಕ್ಷಣ ಸುಧಾರಣಾ ಸಮಿತಿ ಅಧ್ಯಕ್ಷ ಅಮೃತೇಶ್ವರಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿರಮೇಶ್, ನಗರಸಭೆ ಮಾಜಿ ಅಧ್ಯಕ್ಷರುಗಳಾದ ಈ.ಮಂಜುನಾಥ್, ಶ್ರೀಮತಿ ಮಂಜುಳಾ, ನಗರಸಭೆ ಸದಸ್ಯರುಗಳಾದ ಈರಲಿಂಗೇಗೌಡ, ಡಿಶ್ ಮಂಜುನಾಥ್, ಹಾಗೂ ಮೃತರ ಕುಟುಂಬಸ್ಥರು, ಕಾಂಗ್ರೆಸ್ ಮುಖಂಡರು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
