March 6, 2026
000001

ಹಿರಿಯೂರು :

ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ಹೊರರೋಗಿಗಳಿಗೆ ಹಾಗೂ ಅವರ ಸಹಾಯಕರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ರೆಡ್ ಕ್ರಾಸ್ ಸಂಸ್ಥೆಯಿಂದ ಕಳೆದ ಐದು ವರ್ಷಗಳಿಂದ ವಾರದಲ್ಲಿ ಆರು ದಿನಗಳು ಉಚಿತ ಆಹಾರ ವಿತರಣೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂಬುದಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಖಜಾಂಚಿ ಸಣ್ಣಭೀಮಣ್ಣ ಹೇಳಿದರು.

ನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಿರಿಯೂರು ಶಾಖೆ ವತಿಯಿಂದ  ಸೋಮವಾರದಿಂದ ಶನಿವಾರದವರೆಗೆ ಸರ್ಕಾರಿ ಆಸ್ಪತ್ರೆಗೆ ಬರುವ ಹೊರರೋಗಿಗಳಿಗೆ ಹಾಗೂ ಅವರ ಸಹಾಯಕರಿಗೆ ಉಚಿತ ಆಹಾರ ವಿತರಿಸಿ, ನಂತರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *