
ಹಿರಿಯೂರು:
ತಾಲ್ಲೂಕಿನ ಶ್ರೀಶುಭೋದಯ ಶೈಕ್ಷಣಿಕ ಸೇವಾ ಆಶ್ರಮದ ಹಿತೈಷಿಗಳೂ, ದಾನಿಗಳು ಹಾಗೂ ಅಬ್ಬಿನಹೊಳೆ ಪೊಲೀಸ್ ಸ್ಟೇಷನ್ ಸಬ್ ಇನ್ಸ್ ಪೆಕ್ಟರ್ ಆದ ಶ್ರೀ ದೇವರಾಜ್ ರವರು ತಮ್ಮ ಆತ್ಮೀಯ ಸ್ನೇಹಿತರಾದ ಪ್ರಕಾಶ್ ಬಬ್ಬೂರುರವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಆಶ್ರಮದ ಹಿರಿಯರಿಗೆ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಿಸಿದ್ದಾರೆ ಎಂಬುದಾಗಿ ಆಶ್ರಮದ ಮುಖ್ಯಸ್ಥರಾದ ತೇಜೋಮೂರ್ತಿ ತಿಳಿಸಿದ್ದಾರೆ.

ಶ್ರೀಯುತರ ಸೇವಾಮನೋಭಾವಕ್ಕೆ ಶ್ರೀಆಶ್ರಮ ಸಮಿತಿ ವತಿಯಿಂದ ಅವರಿಗೆ ಹಾಗೂ ಅವರ ಕುಟುಂಬವರ್ಗಕ್ಕೆ ದೈವಾನುಗ್ರಹ ಪ್ರಾಪ್ತಿಯಾಗಲೆಂದು ಪ್ರಾರ್ಥಿಸುತ್ತೇವೆ ಎಂಬುದಾಗಿ ಆಶ್ರಮ ನಿವಾಸಿಗಳ ಪರವಾಗಿ ಆಶ್ರಮದ ಮುಖ್ಯಸ್ಥರಾದ ತೇಜೋಮೂರ್ತಿ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
