October 6, 2025
00000002

ಹಿರಿಯೂರು:

ಸರ್ಕಾರ ನಡೆಸುತ್ತಿರುವ ಜಾತಿಗಣತಿ ಸಮೀಕ್ಷೆಯಲ್ಲಿ ನಮ್ಮ ಒಕ್ಕಲಿಗರ ಸಮುದಾಯದ ಜನರಿಗೆ ವಿವಿಧ ಅಂಶಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪಟ್ಟನಾಯಕನಹಳ್ಳಿ ಮಹಾಸಂಸ್ಥಾನಮಠದ ಪೀಠಾಧ್ಯಕ್ಷರಾದಂತಹ ಪರಮಪೂಜ್ಯರಾದ ಶ್ರೀನಂಜಾವಧೂತ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಸಪ್ಟಂಬರ್ 21 ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ನಗರದ ತನ್ಯಾಸಿಗೌಂಡರ್ ಕಲ್ಯಾಣಮಂಟಪದಲ್ಲಿ ಬೃಹತ್ ಸಭೆಯನ್ನು ಕರೆಯಲಾಗಿದೆ ಎಂಬುದಾಗಿ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರಾದ ಡಿ.ರಾಮಚಂದ್ರಪ್ಪ ತಿಳಿಸಿದ್ದಾರೆ.

ನಗರದಲ್ಲಿನ ತಾಲ್ಲೂಕು ಒಕ್ಕಲಿಗರ ಸಂಘದ ಹಾಸ್ಟೆಲ್ ಕಟ್ಟಡದ ಸಭಾಭವನದಲ್ಲಿ ಸಪ್ಟಂಬರ್ 21 ರಂದು ಭಾನುವಾರದಂದು ತನ್ಯಾಸಿ ಗೌಂಡರ್ ಕಲ್ಯಾಣಮಂಟಪದಲ್ಲಿ ಹಮ್ಮಿಕೊಳ್ಳಲಾಗಿರುವ “ಒಕ್ಕಲಿಗರ ಜಾಗೃತಿ ಸಮಾವೇಶದ” ಅಂಗವಾಗಿ ಕರೆಯಲಾಗಿದ್ದ ಪೂರ್ವಭಾವಿಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಈ ಸಭೆಯಲ್ಲಿ ಕರ್ನಾಟಕ ಸರ್ಕಾರವು ರಾಜ್ಯದ ಎಲ್ಲಾ ಸಮುದಾಯಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 2025ರ ಸೆಪ್ಟಂಬರ್ ತಿಂಗಳಲ್ಲಿ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಒಕ್ಕಲಿಗರ ಸಮುದಾಯದ ಜನರು ಕೊಡಬೇಕಾದ ಮಾಹಿತಿಗಳ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಗುವುದು, ನಮ್ಮ ಒಕ್ಕಲಿಗ ಸಮುದಾಯದ ಜನರು ಹೆಚ್ಚಿನಸಂಖ್ಯೆಯಲ್ಲಿ ಈ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಬೇಕು ಎಂಬುದಾಗಿ ಅವರು ಮನವಿ ಮಾಡಿದ್ದಾರೆ.

ಅಲ್ಲದೆ ಈ ಸಭೆಗೆ ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹಿರಿಯೂರು ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಒಕ್ಕಲಿಗ ಸಂಘದ ಅಧ್ಯಕ್ಷರುಗಳು, ಮಹಿಳಾ ಘಟಕದ ಅಧ್ಯಕ್ಷರುಗಳು,  ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ತಾಲ್ಲೂಕುಗಳ ಒಕ್ಕಲಿಗ ಸಮುದಾಯದ ಮುಖಂಡರುಗಳು,ಆಗಮಿಸುವ ಮೂಲಕ ಅಗತ್ಯ ಸೂಚನೆ ಹಾಗೂ ಸಲಹೆಗಳನ್ನು ನೀಡುವ ಮೂಲಕ ಈ ಸಭೆಯನ್ನು ಯಶಸ್ವಿಗೊಳಿಸಬೇಕು ಎಂಬುದಾಗಿ ಅವರು ಒಕ್ಕಲಿಗ ಸಮಾಜದ ಬಂಧುಗಳಲ್ಲಿ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಒಕ್ಕಲಿಗ ಸಂಘದ ಜಿಲ್ಲಾಧ್ಯಕ್ಷರಾದ ಚೇತನ್, ತಾಲ್ಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ಡಿ.ರಾಮಚಂದ್ರಪ್ಪ, ಕಾರ್ಯಾಧ್ಯಕ್ಷ ಜಯಕುಮಾರ್, ಕಾರ್ಯದರ್ಶಿ ಏಕಾಂತಪ್ಪ, ಹಾಗೂ ಸಂಘದ ನಿರ್ದೇಶಕರುಗಳಾದ ಚಿಗಳೆಕಟ್ಟೆ ಕಾಂತರಾಜ್, ಕಂದಿಕೆರೆ ರಂಗನಾಥ್, ಆಲೂರು ವೀರಣ್ಣಗೌಡ, ತಿಪ್ಪೇಸ್ವಾಮಿ, ಶಿವಾನಂದಪ್ಪ, ಯುವಘಟಕದ ಅಧ್ಯಕ್ಷ ಆರ್.ಗೌಡಬೀರೇನಹಳ್ಳಿ, ರಾಜೀವ್, ರವಿಚಂದ್ರೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ಮಮತಾಕೃಷ್ಣಮೂರ್ತಿ, ಆಲೂರುಕಲಾವತಿ, ಕಲ್ಪನಾಹುಲಗಲಕುಂಟೆ, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ದಿನೇಶ್, ರಾಜ್ಯ ರೈತಸಂಘದ ಅಧ್ಯಕ್ಷ ಕೆ.ಸಿ.ಹೊರಕೇರಪ್ಪ, ಕೆಂಪೇಗೌಡ ಸಂಘದ ಅಧ್ಯಕ್ಷ ಬಂಡಿವೀರಣ್ಣ, ಸೇರಿದಂತೆ ಇತರರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *