
ಹಿರಿಯೂರು:
ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ರವರು ಈ ದಿನ ಮಂಡಿಸಿರುವ 9ನೇ ಬಜೆಟ್. ಇಂದು ಮಂಡಿಸಿರುವ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ 140 ಕೋಟಿ ರುಪಾಯಿ ಬಜೆಟ್ ಮಂಡಿಸಿದ್ದು ಕೇಂದ್ರ ಸರ್ಕಾರ ಕೃಷಿ ಕ್ಷೇತ್ರವನ್ನು ಸಂಪೂರ್ಣ ಕಡೆಗಣಿಸಲಾಗಿದೆ,
ಬಯಲು ಸೀಮೆ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಗೆ ನಯಾಪೈಸೆ ಹಣ ಘೋಷಿಸದೆ ಜಿಲ್ಲೆಯ ರೈತರಿಗೆ ಅನ್ಯಾಯ ವೆಸಗಿದೆ. ಇದು ರೈತ ವಿರೋಧಿ ಬಜೆಟ್ ಎಂಬುದಾಗಿ ಕರ್ನಾಟಕ ರಾಜ್ಯ ರೈತ ಸಂಘ, ಹಿರಿಯೂರು ಹಾಗೂ ರಾಜ್ಯ ವಿಭಾಗಿಯ ಉಪಾಧ್ಯಕ್ಷರಾದ ಕೆ. ಸಿ. ಹೊರಕೇರಪ್ಪಅವರು ಆರೋಪಿಸಿದ್ದಾರೆ.
