
ಹಿರಿಯೂರು:
ಗ್ರಾಮೀಣ ಭಾಗದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರಕಬೇಕು ಎಂಬ ಉದ್ದೇಶದೊಂದಿಗೆ ಕಾಲೇಜಿನ ಸೌಲಭ್ಯಗಳನ್ನು ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ಮೂಲ ಸೌಲಭ್ಯ ಕಲ್ಪಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಭರವಸೆ ನೀಡಿದರು.
ತಾಲ್ಲೂಕಿನ ಯರಬಳ್ಳಿ ಗ್ರಾಮದ ನೂತನ ಸರ್ಕಾರಿ ಪದವಿ ಪೂರ್ವ ಕಾಲೇಜನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ. ಸಮಸ್ಯೆ ಗಳನ್ನು ಅವರು ಆಲಿಸಿದರು.ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಶಿಕ್ಷಕರು ಗ್ರಾಮಸ್ಥರು ಉಪಸ್ಥಿತರಿದ್ದರು.

