
ಹಿರಿಯೂರು:
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ವಿದ್ಯಾರ್ಥಿಗಳಿಗೆ ಸಹಾಯವಾಗುವ ಉದ್ದೇಶದಿಂದ ಪ್ರಥಮ ಚಿಕಿತ್ಸೆ ಪೆಟ್ಟಿಗೆಯನ್ನು ನೀಡುತ್ತಿದ್ದು, ಯಾವುದೇ ಅಪಘಾತವಾದ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ಪೆಟ್ಟಿಗೆ ಅತ್ಯಂತ ಸಹಕಾರಿಯಾಗಲಿದೆ, ವಿದ್ಯಾರ್ಥಿಗಳು ಈ ಪೆಟ್ಟಿಗೆಯ ಸದ್ಭಳಕೆ ಮಾಡಿಕೊಳ್ಳಬೇಕು ಎಂಬುದಾಗಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ವೆಂಕಟೇಶ್ ಹೇಳಿದರು.

ನಗರದ ಬಿ.ಆರ್.ಸಿ ಕೇಂದ್ರದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರೋಟರಿ ಹಾಗೂ ಆರೋಗ್ಯ ಅಧಿಕಾರಿಗಳ ಕಚೇರಿ ಹಿರಿಯೂರು ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪ್ರಥಮ ಚಿಕಿತ್ಸಾ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ, ರೆಡ್ ಕ್ರಾಸ್ ಚೇರ್ಮನ್ ಹೆಚ್.ಎಸ್.ಸುಂದರ್ ರಾಜ್, ಕಾರ್ಯದರ್ಶಿ ಎಂ.ಎಸ್.ರಾಘವೇಂದ್ರ, ಕೆ.ಎ.ವರುಣ್, ಸಣ್ಣಭೀಮಣ್ಣ, ರವೀಂದ್ರ ನಾಯಕ್, ದೇವರಾಜ್, ಮಹಾಬಲೇಶ್ವರ ಶೆಟ್ಟಿ, ಆದಿವಾಲನಾಗರಾಜ್, ಬ್ಯಾಡರಹಳ್ಳಿ ತಿಪ್ಪೇಸ್ವಾಮಿ ,ಎ.ರಾಘವೇಂದ್ರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

