
ಹಿರಿಯೂರು :
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿಯವರು ತಮ್ಮ ಗೌರವ ಕಾರ್ಯದರ್ಶಿ ಹುದ್ದೆಗೆ ಅನಿವಾರ್ಯ ಕಾರಣಗಳಿಂದ ರಾಜೀನಾಮೆ ನೀಡಿದ್ದಾರೆ, ಈ ಕುರಿತು ಮಾಧ್ಯಮಗಳಿಗೆ ತಮ್ಮ ರಾಜೀನಾಮೆ ಪತ್ರವನ್ನು ಬಿಡುಗಡೆ ಮಾಡಿರುವ ಅವರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ತಮ್ಮ ರಾಜೀನಾಮೆಯನ್ನು ಈ ಕೂಡಲೇ ಅಂಗೀಕರಿಸುವಂತೆ ಈ ಮೂಲಕ ಮನವಿ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ತಾಲ್ಲೂಕಿನ 7 ನೇ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲೆಂದು ಸಮ್ಮೇಳನಕ್ಕೆ ಶುಭ ಹಾರೈಸುತ್ತಾ, ಇಂದಿನ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಹುದ್ದೆ ಅತ್ಯಂತ ಗೌಣ್ಯವಾಗಿ ಹಾಗೂ ಅನಾವಶ್ಯಕತೆಯಿಂದ ಕೂಡಿರುವುದರಿಂದ ನನ್ನ ಸ್ವಇಚ್ಛೆಯಿಂದ ಈ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂಬುದಾಗಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

