
ಹಿರಿಯೂರು:
ನಗರದ ಪ್ರವಾಸಿ ಮಂದಿರದಲ್ಲಿ ಸೆಪ್ಟಂಬರ್ 21ರ ಭಾನುವಾರ ಬೆಳಗ್ಗೆ 11ಗಂಟೆಗೆ ಈ ವರ್ಷದ ವಾಲ್ಮೀಕಿ ಜಯಂತೋತ್ಸವವನ್ನು ಆಚರಣೆ ಮಾಡಲು ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ತಾಲ್ಲೂಕು ವಾಲ್ಮೀಕಿ ನಾಯಕ ಮಹಾಸಭಾ ಮಾಜಿ ಅಧ್ಯಕ್ಷರಾದ ತಿಪ್ಪೇರುದ್ರಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ಸಭೆಯಲ್ಲಿ ವರ್ಷದ ಮಹರ್ಷಿ ವಾಲ್ಮೀಕಿ ಜಯಂತೋತ್ಸವವನ್ನು ಆಚರಣೆ ಮಾಡಲು ಜಯಂತೋತ್ಸವದ ಸಾಧಕ-ಬಾಧಕಗಳನ್ನು ಚರ್ಚೆ ಮಾಡಲು ತಾಲ್ಲೂಕಿನ ಎಲ್ಲಾ ವಾಲ್ಮೀಕಿ ನಾಯಕ ಸಮಾಜದ ಬಂಧುಗಳು ಪಕ್ಷ ಬೇಧ ಮರೆತು ಆಗಮಿಸಿ ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಲು ಅವರು ಮನವಿ ಮಾಡಿದ್ದಾರೆ. ಆದ್ದರಿಂದ ತಾಲ್ಲೂಕಿನ ಎಲ್ಲಾ ನಾಯಕ, ವಾಲ್ಮೀಕಿ ಸಮಾಜದ ಬಂಧುಗಳು ಹಿರಿಯರು, ಮುಖಂಡರುಗಳು, ಎಲ್ಲಾ ಪಕ್ಷದ ನಾಯಕ ಸಮುದಾಯದ ರಾಜಕೀಯ ನೇತಾರರು, ಸರ್ಕಾರಿ ನೌಕರರು, ನಿವೃತ್ತ ಸರ್ಕಾರಿ ನೌಕರರು, ತಾಲೂಕಿನ ನಾಯಕ ಸಮುದಾಯದ ಮಹಿಳಾ ಸಂಘಟನೆಗಳು, ಯುವಸಂಘಟನೆಗಳು ಸಮಾಜದ ಎಲ್ಲಾ ಸಂಘ-ಸಂಸ್ಥೆಗಳ ಮುಖ್ಯಸ್ಥರುಗಳು ನಾಯಕ ಬಂಧುಗಳು ಸಭೆಗೆ ಹಾಜರಾಗಬೇಕು ಎಂಬುದಾಗಿ ಅವರು ಮನವಿ ಮಾಡಿದ್ದಾರೆ.
