March 2, 2026
003

ಹಿರಿಯೂರು:

ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ 16 ಕೆರೆಗಳು ಹಾಗೂ ಗಾಯತ್ರಿ ಜಲಾಶಯಕ್ಕೆ ಕುಡಿಯುವ ನೀರಿಗಾಗಿ ನೀರಿನ ಮರು ಹಂಚಿಕೆಗೆ ಸರ್ಕಾರದಿಂದ ಅನುಮೋದನೆ ದೊರೆತಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈಗಾಗಲೇ ಹಂಚಿಕೆಯಾಗಿದ್ದ 0.20 ಟಿ.ಎಂ.ಸಿ. ನೀರಿಗೆ ಹೆಚ್ಚುವರಿಯಾಗಿ 0.107 ಟಿ.ಎಂ.ಸಿ.ನೀರನ್ನು ಮಂಜೂರು ಮಾಡಿ, ಒಟ್ಟಾರೆ 0.307 ಟಿ.ಎಂ.ಸಿ.ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಮರು ಹಂಚಿಕೆ ಮಾಡಲಾಗಿದೆ. ಎಂದರಲ್ಲದೆ,

ಇದರ ಜೊತೆಗೆ, ಜವನಗೊಂಡನಹಳ್ಳಿ ಹೋಬಳಿಯ ಎಲ್ಲಾ 16 ಕೆರೆಗಳಿಗೆ ಕುಡಿಯುವ ನೀರು ತುಂಬಿಸುವ ಯೋಜನೆಗೆ ಸಂಬಂಧಿಸಿದಂತೆ ಡಿ.ಪಿ.ಆರ್. (DPR – Detailed Project Report) ತಯಾರಿಸಲು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ.

ಬರಪೀಡಿತ ಪ್ರದೇಶದ 6 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 100ಕ್ಕೂ ಹೆಚ್ಚು ಜನವಸತಿ ಪ್ರದೇಶಗಳ ಕುಡಿಯುವ ನೀರು ಹಾಗೂ ಅಂತರ್ಜಲ ಮಟ್ಟವನ್ನು ವೃದ್ಧಿಪಡಿಸುವ ದಿಕ್ಕಿನಲ್ಲಿ ಇದು ಶಾಶ್ವತ ಪರಿಹಾರದತ್ತ ಸಾಗುತ್ತಿರುವ ಮಹತ್ವದ ಕ್ರಮವಾಗಿದೆ ಎಂಬುದಾಗಿ ಅವರು ಹೇಳಿದರು.

ಈ ಮಹತ್ವದ ನಿರ್ಣಯಕ್ಕೆ ಸಹಕಾರ ನೀಡಿದ ಮಾನ್ಯ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಸಚಿವರಾದ ಶ್ರೀ ಎನ್.ಎಸ್.ಭೋಸರಾಜು ರವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *