March 2, 2026
000003

ಹಿರಿಯೂರು :

ಇಂದು ಸಮಾಜದ ಎಲ್ಲಾ ವೃತ್ತಿಗಳಿಗೂ ಕರಪ್ ಷನ್ ವ್ಯಾಪಿಸಿದ್ದು, ಸಾರ್ವಜನಿಕರು ಎಲ್ಲಾ ಅಧಿಕಾರಿಗಳನ್ನು ಅನುಮಾನದಿಂದ ನೋಡುವಂತಾಗಿದೆ, ಆದರೆ ಶಿಕ್ಷಕ ಹುದ್ದೆ ಮಾತ್ರ ಕರಪ್ ಶನ್ ಇಲ್ಲದ ಹುದ್ದೆಯಾಗಿದೆ, ಇಂತಹ ಹುದ್ದೆಯನ್ನು ಆಯ್ಕೆ ಮಾಡಿಕೊಂಡಿರುವ ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂಬುದಾಗಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರುಹನುಮಂತರಾಯಪ್ಪ ಶುಭಹಾರೈಸಿದರು.

ನಗರದ ವಾಣಿವಿಲಾಸ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಗಿರೀಶ ವಿದ್ಯಾಸಂಸ್ಥೆಯ ಬಿ.ಇಡಿ.ಪ್ರಶಿಕ್ಷಣಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಮಾಜದಲ್ಲಿ ಶಿಕ್ಷಕ ಹುದ್ದೆಯು ಅತ್ಯಂತ ಪವಿತ್ರವಾದ ಹುದ್ದೆಯಾಗಿದ್ದು, ಉತ್ತಮ ಸಮಾಜ ನಿರ್ಮಾಣದಲ್ಲಿ ನಿಮ್ಮಗಳ ಪಾತ್ರ ಪ್ರಮುಖವಾಗಿದೆ, ನೀವೆಲ್ಲಾ ಭಾವೀ ಭವಿಷ್ಯದ ಭಾರತವನ್ನು ನಿರ್ಮಾಣ ಮಾಡುವ ಶಿಲ್ಪಿಗಳು ಎಂದರೆ ತಪ್ಪಾಗಲಾರದು, ಈ ನಿಟ್ಟಿನಲ್ಲಿ ನೀವು ಸಮಾಜದಲ್ಲಿ ಉತ್ತಮ ಜವಾಬ್ದಾರಿಯುತ ಶಿಕ್ಷಕರಾಗಿ ಹೊರಹೊಮ್ಮಬೇಕು ಎಂಬುದು ನಮ್ಮಗಳ ಆಶಯವಾಗಿದೆ ಎಂಬುದಾಗಿ ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಬಿ.ಇಡಿ ಪ್ರಶಿಕ್ಷಣಾರ್ಥಿಗಳಾದ ವೃತಿಕ್ ಹಾಗೂ ಐಶ್ವರ್ಯ ಇವರುಗಳನ್ನು ಶಾಲು ಹೊದಿಸಿ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ, ಬೀಳ್ಕೊಡಲಾಯಿತು. ಬಿ.ಇಡಿ ಪ್ರಶಿಕ್ಷಣಾರ್ಥಿಗಳು ವಿದ್ಯಾಸಂಸ್ಥೆಗೆ ವಾಲ್ಮೀಕಿ ಭಾವಚಿತ್ರವನ್ನು ಕೊಡುಗೆಯಾಗಿ ನೀಡಿದರು.

ಈ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಆಡಳಿತಾಧಿಕಾರಿ ಶ್ರೀಮತಿ ಹೇಮಲತಾ, ಕೋ-ಆರ್ಡಿನೇಟರ್ ಶ್ರೀಮತಿ ರಚನ, ಶಿಕ್ಷಕಿಯರುಗಳಾದ ಶ್ರೀಮತಿ ರಜಿಯಾ, ಶ್ರೀಮತಿ ಸಬೀಹಾ, ಶ್ರೀಮತಿ ಮುಬೀನಾ, ಶ್ರೀಮತಿ ಹೇಮಲತಾ, ಶ್ರೀಮತಿ ಮಮತಾ, ಶ್ರೀಮತಿ ದ್ರಾಕ್ಷಾಯಿಣಿ, ಶ್ರೀಮತಿ ಮಮತಾ, ಶ್ರೀಮತಿ ಸಾಧಿಕಾ, ಶ್ರೀಮತಿ ಸುಲೋಚನಾ, ಶ್ರೀಮತಿ ಅಕ್ಷಿತಾ, ಕಾವ್ಯ, ಪೂಜಾ, ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ಭಾಗ್ಯ, ಶ್ರೀಮತಿ ಜಯಸುಧಾ, ಉಮೇಶ್ ಯಾದವ್, ಶಿವರಾಜ್ ನಾಯ್ಕ ಸೇರಿದಂತೆ ಶಾಲಾ ಶಿಕ್ಷಕ-ಶಿಕ್ಷಕಿಯರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *