March 6, 2026
001

ಹಿರಿಯೂರು :

ನಮ್ಮ ಸವಿತಾ ಸಮಾಜ ಸರ್ಕಾರದ ಹಲವಾರು ಸೌಲಭ್ಯಗಳಿಂದ ವಂಚಿತವಾಗಿದೆ, ನಮ್ಮ ಸಮಾಜದ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು, ಈ ಬಗ್ಗೆ ಸಮಾಜದ ಬಂಧುಗಳು ಹೆಚ್ಚಿನ ಗಮನಹರಿಸಬೇಕು, ಪ್ರತಿ ಮಂಗಳವಾರ ಅಂಗಡಿಗಳನ್ನು ಬಂದ್ ಮಾಡಿ ತಮ್ಮ ಕುಟುಂಬ ಸದಸ್ಯರ ಜೊತೆ ಕಾಲ ಕಳೆಯಬೇಕು ಎಂಬುದಾಗಿ ಸವಿತಾ ಸಮಾಜದ ಅಧ್ಯಕ್ಷರಾದ ನರಸಿಂಹಮೂರ್ತಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕಿನ ಸವಿತಾ ಸಮಾಜದ ವತಿಯಿಂದ ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆಯನ್ನು ವಹಿಸಿ, ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ಸರ್ಕಾರದಿಂದ ಉಚಿತ ನಿವೇಶನ ಪಡೆಯುವ ಬಗ್ಗೆ ಚರ್ಚಿಸಲಾಯಿತು. ಈ ಸಭೆಯಲ್ಲಿ ಸವಿತಾ ಸಮಾಜದ ಗೌರವಾಧ್ಯಕ್ಷರಾದ ಮನೋಹರ್, ಮಾಜಿ ಅಧ್ಯಕ್ಷರಾದ ಮಹಾಲಿಂಗಪ್ಪ, ತಿಪ್ಪೇಸ್ವಾಮಿ, ನಾಗೇಶ್, ನಾಗರಾಜ್, ಕೃಷ್ಣಪ್ಪ ಇತರರು ಭಾಗವಹಿಸಿದ್ದರು.

About The Author

Leave a Reply

Your email address will not be published. Required fields are marked *