
ಹಿರಿಯೂರು :
ನಗರದ ಶ್ರೀತೇರುಮಲ್ಲೇಶ್ವರ ದೇವಾಲಯಕ್ಕೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರು ಭೇಟಿ ನೀಡಿ, ಮಹಾಶಿವರಾತ್ರಿ ಹಬ್ಬದ ಪವಿತ್ರ ಸಂದರ್ಭದಲ್ಲಿ ಶ್ರೀತೇರುಮಲ್ಲೇಶ್ವರ ಸ್ವಾಮಿಯ ದರ್ಶನ ಪಡೆದು ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಹಾಶಿವರಾತ್ರಿ ಹಬ್ಬವು ಶ್ರದ್ಧೆ ಹಾಗೂ ಭಕ್ತಿಯ ಪ್ರತೀಕವಾಗಿದ್ದು, ನಾಡಿನ ಸಮಸ್ತ ಜನತೆಗೆ ಶಾಂತಿ, ಅಭಿವೃದ್ಧಿ ಹಾಗೂ ಸುಖ ಸಮೃದ್ಧಿಯನ್ನು ಕರುಣಿಸಲಿ ಎಂಬುದಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
