
ಹಿರಿಯೂರು :
ಸ್ಥಳೀಯ ನಿವಾಸಿಗಳಿಗೆ ಶಾಶ್ವತ ಸ್ವಚ್ಛತಾ ವ್ಯವಸ್ಥೆ, ಸಮರ್ಪಕ ಕುಡಿಯುವ ನೀರು ಹಾಗೂ ವಿದ್ಯುತ್ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ಮಹತ್ವದ ಯೋಜನೆಗಳ ಮೂಲಕ ದಿಟ್ಟ ಹೆಜ್ಜೆ ಇಡಲಾಗಿದ್ದು, ಈ ಭಾಗದ ಸಮಗ್ರ ಅಭಿವೃದ್ಧಿಗೆ ಈ ಕಾಮಗಾರಿಗಳು ಹೊಸ ಚೈತನ್ಯ ತರುತ್ತವೆ ಎಂಬುದಾಗಿ ಜಿಲ್ಲಾಉಸ್ತುವಾರಿರಾದ ಸಚಿವರಾದ ಡಿ.ಸುಧಾಕರ್ ಹೇಳಿದರು.
ನಗರದ ವಾರ್ಡ್ ನಂ.30ರ ಹರಿಶ್ಚಂದ್ರಘಾಟ್ ನಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿ ವತಿಯಿಂದ ಯು.ಜಿ.ಡಿ, ಮೇಲ್ದಂಡೆ ನೀರಿನ ಟ್ಯಾಂಕ್, ವಿದ್ಯುತೀಕರಣ ಹಾಗೂ ವಿವಿಧ ಮೂಲಭೂತ ಸೌಕರ್ಯಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿ, ನಂತರ ಅವರು ಮಾತನಾಡಿದರು.
ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
